ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸುಷ್ಮಾ, ಸಿಎಂ ಭೇಟಿ ಮಾಡಿದ ರೆಡ್ಡಿ ಸಹೋದರರು (Yeddyurappa | Karnataka | Illegal mining | Reddy brothers | Janardhan Reddy | Karuanakar)
ಅಕ್ರಮ ಗಣಿಗಾರಿಕೆ ವಿವಾದದ ಕೇಂದ್ರ ಬಿಂದುಗಳಾದ ಸಚಿವ ಜಿ. ಜನಾರ್ಧನ ರೆಡ್ಡಿ ಮತ್ತು ಕರುಣಾಕರ ರೆಡ್ಡಿ, ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಮತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರೆಡ್ಡಿ ಸಹೋದರರು ತಮಗೆ ಆಪ್ತರಾದ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿ ಚರ್ಚಿಸಿದ ನಂತರ, ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದಾರೆ. ತಮಗೂ ಅಕ್ರಮ ಗಣಿಗಾರಿಕೆಗೆ ಯಾವುದೇ ರೀತಿಯ ಸಂಬಂಧಗಳಿಲ್ಲವೆಂದು ರೆಡ್ಡಿ ಸಹೋದರರು ಸ್ಪಷ್ಟಪಡಿಸಿದ್ದಾರೆ
ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿ, ಇತ್ತೀಚಿನ ಬೆಳವಣಿಗೆಗಳ ಕುರಿತಂತೆ ತಾವು ಹಾಗೂ ಸಚಿವ ಕರುಣಾಕರ ರೆಡ್ಡಿ ವಿವರಿಸಿರುವುದಾಗಿ ಹೇಳಿದ್ದಾರೆ.ಕಾಂಗ್ರೆಸ್ ಆರೋಪಗಳಲ್ಲಿ ಸತ್ಯಾಂಶಗಳಿಲ್ಲ.ಜನತೆ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದಾರೆ. ವಿರೋಧ ಪಕ್ಷಗಳು ಯಾವುದೇ ತಂತ್ರವನ್ನು ಹೆಣೆದರೂ ಸೋಲು ಕಟ್ಟಿಟ್ಟ ಬುತ್ತಿ ಎಂದು ವ್ಯಂಗವಾಡಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ತಾವು ಕಾಂಗ್ರೆಸ್ ಪಕ್ಷದ ವಿರುದ್ಧ ಒಂದಾಗಿ ಹೋರಾಡುತ್ತಿದ್ದೇವೆ.ನಾವು ಪ್ರಾಮಾಣಿಕ ಬಿಜೆಪಿ ಕಾರ್ಯಕರ್ತರು ಎಂದು ಜನಾರ್ಧನ್ ರೆಡ್ಡಿ ತಿಳಿಸಿದ್ದಾರೆ.
ಸೋಮವಾರದಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಕರೆದಿದ್ದು, ಸಭೆಯಲ್ಲಿ ಕಾಂಗ್ರೆಸ್ ಆರೋಪಗಳ ಕುರಿತಂತೆ ಪ್ರತ್ರಿಕ್ರಿಯೆ ನೀಡುವುದಾಗಿ ಹೇಳಿದ್ದಾರೆ.
ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಸರಕಾರವನ್ನು ಉಳಿಸಿಕೊಳ್ಳುವ ಪ್ರಯತ್ನ ಮುಂದುವರಿಸುವಂತೆ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ರಾಜ್ಯ ಘಟಕಕ್ಕೆ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.