ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಕ್ರಮ ಗಣಿಗಾರಿಕೆಗೆ ಆಡ್ವಾಣಿ,ಸುಷ್ಮಾ ಕೃಪಾಕಟಾಕ್ಷ: ಹೊರಟ್ಟಿ (Advani | Sushma swaraj | Basavaraj horatti | Yeddyurappa)
Bookmark and Share Feedback Print
 
ಬಿಜೆಪಿ ಹಿರಿಯ ಮುಖಂಡ ಆಡ್ವಾಣಿ ಹಾಗೂ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಗಣಿ ಹಗರಣಕ್ಕೆ ರಕ್ಷಾ ಕವಚವಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆರೋಪಿಸಿದ್ದಾರೆ.

ತಾಲೂಕಿನ ಯಡಹಳ್ಳಿ ಗ್ರಾಮದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, 35 ಸಾವಿರ ಕೋಟಿ ರೂ. ಸಾಲದ ಹೊರೆಯಲ್ಲಿರುವ ರಾಜ್ಯ ಸರಕಾರದ ಆಡಳಿತ ವ್ಯವಸ್ಥೆ ಹದಗೆಟ್ಟಿದೆ. ಬಿಜೆಪಿ ಸರಕಾರ ಗಣಿ ಧಣಿಗಳ ಕೈಯಲ್ಲಿ ಸೋತು ಹೋಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿವೃದ್ದಿ ಮಾಡಬೇಕೆಂಬ ಕನಸು ಇಟ್ಟುಕೊಂಡಿದ್ದಾರೆ. ಆದರೆ ಬಳ್ಳಾರಿ ಸಚಿವರು ಬಿಡುತ್ತಿಲ್ಲ. ಪ್ರತಿಪಕ್ಷ ಕಾಂಗ್ರೆಸ್ ಕೂಡ ರಾಜ್ಯದಲ್ಲಿನ ಆಡಳಿತ ಸುಧಾರಣೆಗೆ ಹೋರಾಟ ಕೈಗೊಳ್ಳುತ್ತಿಲ್ಲ ಎಂದರು.

ತಾವು ಸತತ ಆರನೇ ಬಾರಿಗೆ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವುದು ದೇಶದ ಇತಿಹಾಸದಲ್ಲಿ ಮೊಟ್ಟ ಮೊದಲು ಎಂದು ಹೊರಟ್ಟಿ ಬಣ್ಣಿಸಿದರು. ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಸಂಘಟನೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆ.16ರ ನಂತರ ಬೀದರ್‌ನಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರತಿ ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಮಾಡಲು ಕಾರ್ಯಕರ್ತರ ಜತೆ ಸಂವಾದ ಏರ್ಪಡಿಸಲಾಗುತ್ತಿದೆ ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ