ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಉಗ್ರಪ್ಪ ನಾಲಿಗೆ ಬಿಗಿ ಹಿಡಿದು ಮಾತಾಡಲಿ: ಧನಂಜಯ್ ಆಕ್ರೋಶ (Ugrappa | Dhanajaya Kumar | BJP | Congress | Yeddyurappa)
Bookmark and Share Feedback Print
 
ಕಾರಾವಾರದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬ ಶಾಮೀಲಾಗಿದೆ ಎಂಬ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಆರೋಪಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಉಗ್ರಪ್ಪ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು.ಇಲ್ಲದಿದ್ದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಬುಧವಾರ ರಾಜ್ಯದಲ್ಲಿನ ಅಕ್ರಮ ಗಣಿಗಾರಿಕೆ ವಿಚಾರ ಕುರಿತಂತೆ ಬಿಜೆಪಿ ಮುಖಂಡರಾದ ಬಚ್ಚೇಗೌಡ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹಾಗೂ ಧನಂಜಯ್ ಕುಮಾರ್ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರಪ್ಪ ಆರೋಪದ ವಿರುದ್ಧ ವಾಗ್ದಾಳಿ ನಡೆಸಿದರು.

ಕೇವಲ ರಾಜಕೀಯ ಕಾರಣಕ್ಕಾಗಿ ವಿಪಕ್ಷಗಳು ಹೋರಾಟ ನಡೆಸುತ್ತಿವೆ. ಅಲ್ಲದೇ ಉಗ್ರಪ್ಪ ಅನಾವಶ್ಯಕವಾಗಿ ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ವಿರುದ್ಧ ಆರೋಪ ಮಾಡುತ್ತಿರುವುದು ಮೂರ್ಖತನದ ಪರಮಾವಧಿ. ಆ ನಿಟ್ಟಿನಲ್ಲಿ ಉಗ್ರಪ್ಪ ಕೂಡಲೇ ಕ್ಷಮೆಯಾಚಿಸಬೇಕು ಎಂದು ಧನಂಜಯ್ ಕುಮಾರ್ ಆಗ್ರಹಿಸಿದರು.

ಅದಿರು ಸಾಗಾಟದ ಹಿಂದೆ ಮುಖ್ಯಮಂತ್ರಿಗಳ ಕುಟುಂಬದ ಹಸ್ತಕ್ಷೇಪ ಇದೆ ಎಂದು ಉಗ್ರಪ್ಪ ಗಂಭೀರವಾಗಿ ಆರೋಪಿಸಿದ್ದಾರೆ. ಹಾಗಾಗಿ ಅವರು ನಾಲಿಗೆ ಬಿಗಿ ಹಿಡಿದು ಮಾತನಾಡುವುದನ್ನು ಕಲಿತುಕೊಳ್ಳಬೇಕು ಎಂದು ಸಲಹೆ ನೀಡಿದರು. ಆಧಾರ ರಹಿತ ಆರೋಪ ಮಾಡಿದರೆ ಅದರ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಧನಂಜಯ್ ಕುಮಾರ್‌ರನ್ನು ಬಂಧಿಸಿ-ಉಗ್ರಪ್ಪ: ಬೇಲೇಕೇರಿ ಬಂದರಿನಿಂದ ಅದಿರು ನಾಪತ್ತೆಯಾಗಲು ಸಿಎಂ ಕುಟುಂಬ ನೆರವು ನೀಡಿದೆ ಎಂಬ ಆರೋಪ ಸತ್ಯ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಬುಧವಾರ ಪುನರುಚ್ಚರಿಸಿದ್ದಾರೆ. ಸತ್ಯ ಹೇಳಿರುವುದಕ್ಕೆ ಬಿಜೆಪಿಯ ಧನಂಜಯ್ ಕುಮಾರ್ ಬೆದರಿಕೆ ಹಾಕುತ್ತಿದ್ದಾರೆ. ಬೆದರಿಕೆ ಹಾಕುವುದು ಬಿಜೆಪಿಯ ಸಂಸ್ಕೃತಿಯಾಗಿದೆ ಎಂದು ಅವರು ಈ ಸಂದರ್ಭದಲ್ಲಿ ತಿರುಗೇಟು ನೀಡಿದರು.

ನನ್ನ ವಿರುದ್ಧ ಬೆದರಿಕೆ ಹಾಕಿರುವ ಧನಂಜಯ್ ಕುಮಾರ್ ವಿರುದ್ಧ ದೂರು ದಾಖಲಿಸಿಕೊಂಡು ಅವರನ್ನು ಕೂಡಲೇ ಬಂಧಿಸಬೇಕು ಎಂದು ಉಗ್ರಪ್ಪ ಒತ್ತಾಯಿಸಿದ್ದಾರೆ. ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ದಾಳಿ ನಡೆದರೂ ಕೂಡ ಹೋರಾಟ ಮುಂದುವರಿಯುತ್ತದೆ. ರಾಜ್ಯದ ಸಂಪತ್ತನ್ನು ಉಳಿಸಲು ಹೋರಾಟ ನಡೆಸಿಯೇ ತಿರುತ್ತೇವೆ. ಆದರೆ ಆಡಳಿತಾರೂಢ ಬಿಜೆಪಿ ಸರಕಾರ ಗೂಂಡಾಪ್ರವೃತ್ತಿ ತೋರುತ್ತಿದೆ ಎಂದು ಆರೋಪಿಸಿದರು.
ಸಂಬಂಧಿತ ಮಾಹಿತಿ ಹುಡುಕಿ