ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಲೋಕಾಯುಕ್ತ ತನಿಖೆ ಯಾಕೆ ಬೇಡ?: ಕಾಂಗ್ರೆಸ್‌ಗೆ ಸಿಎಂ (Lokayuktha | Santhosh hegde | CBI | Congress | BJP | Yeddyurappa)
Bookmark and Share Feedback Print
 
'ಅಕ್ರಮ ಗಣಿ ಹಗರಣದ ತನಿಖೆಯನ್ನು ಈಗಾಗಲೇ ಲೋಕಾಯುಕ್ತಕ್ಕೆ ವಹಿಸಲಾಗಿದೆ. ಆದರೆ ವಿರೋಧ ಪಕ್ಷಗಳು ಲೋಕಾಯುಕ್ತ ತನಿಖೆ ಬೇಡ, ಸಿಬಿಐ ತನಿಖೆ ನಡೆಸಿ ಎಂದು ಒತ್ತಾಯಿಸುತ್ತಿವೆ. ಆದರೆ ಲೋಕಾಯುಕ್ತ ತನಿಖೆ ಏಕೆ ಬೇಡ ಎಂಬುದನ್ನು ಸ್ಪಷ್ಟಪಡಿಸಲಿ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಲೋಕಾಯುಕ್ತರು ತನಿಖೆ ನಡೆಸಿ ನೀಡುವ ವರದಿಗೆ ಬದ್ದನಾಗಿರುತ್ತೇನೆ. ಅಷ್ಟೇ ಅಲ್ಲ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ವಿರೋಧ ಪಕ್ಷಗಳಿಗೂ ಅಭಿವೃದ್ಧಿಗೂ ಸಂಬಂಧವೇ ಇಲ್ಲ. ಅವರಿಗೆ ಅಭಿವೃದ್ಧಿ ಬೇಡವಾಗಿದೆ. ರಾಜ್ಯ ಸರಕಾರದ ಅಭಿವೃದ್ಧಿ ಸಹಿಸದೆ ವಿರೋಧ ಪಕ್ಷಗಳು ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸರಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ರೆಡ್ಡಿ ಸಹೋದರರು ಅಕ್ರಮ ಗಣಿಗಾರಿಕೆ ನಡೆಸಿಲ್ಲ ಎಂದು ಮುಖ್ಯಮಂತ್ರಿಗಳೇ ಸರ್ಟಿಫಿಕೇಟ್ ನೀಡುವುದಾದರೆ ತನಿಖೆಯ ಅಗತ್ಯ ಇಲ್ಲ ಎಂದು ಲೋಕಾಯುಕ್ತ ನ್ಯಾ.ಹೆಗ್ಡೆಯವರ ಆಕ್ರೋಶ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಲೋಕಾಯುಕ್ತರು ಗಣಿ ಹಗರಣದ ತನಿಖೆ ಮುಗಿಸುವವರೆಗೆ ತಾವು ಇನ್ನು ಮುಂದೆ ಯಾವುದೇ ಹೇಳಿಕೆಗಳನ್ನು ನೀಡುವುದಿಲ್ಲ ಎಂದರು.

ಮಾಧ್ಯಮಗಳಲ್ಲಿಯೂ ಕೂಡ ದಿನನಿತ್ಯ ಗಣಿಗಾರಿಕೆಯ ಸುದ್ದಿಯೇ ಪ್ರಾಮುಖ್ಯತೆ ಪಡೆಯುತ್ತಿದೆ. ಜನಸಾಮಾನ್ಯರ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲುವುದು ಕಡಿಮೆಯಾಗಿದೆ ಎಂದು ಈ ಸಂದರ್ಭದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ