ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಬಿಐ ಅಂದ್ರೆ...ಲೋಕಾಯುಕ್ತ ದುರ್ಬಳಕೆ ಆಗಲ್ವಾ:ಖರ್ಗೆ (Mallikarjuna Kharge | CBI | Lokayuktha | Congress | Yeddyurappa)
Bookmark and Share Feedback Print
 
ಕೇಂದ್ರ ಸರಕಾರ ಸಿಬಿಐ ಸಂಸ್ಥೆಯನ್ನು ದುರುಪಯೋಗ ಮಾಡಿಕೊಳ್ಳುತ್ತದೆ ಎಂದು ಆರೋಪಿಸುವುದಾದರೆ, ರಾಜ್ಯ ಸರಕಾರ ಲೋಕಾಯುಕ್ತ ಸಂಸ್ಥೆಯನ್ನು ದುರುಪಯೋಗ ಮಾಡಿಕೊಳ್ಳುತ್ತದೆ ಎಂಬ ಅನುಮಾನ ವ್ಯಕ್ತವಾಗುತ್ತದೆ ಎಂದು ಕೇಂದ್ರ ಕಾರ್ಮಿಕ ಸಚಿವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಕೇಂದ್ರ ಸರಕಾರ ಸಿಬಿಐ ಸಂಸ್ಥೆಯನ್ನು ದುರುಪಯೋಗ ಪಡಿಸಿಕೊಂಡಿಲ್ಲ. ಎನ್‌ಡಿಎ ಸರಕಾರ ಅಧಿಕಾರದಲ್ಲಿದ್ದಾಗ ಸಾಕಷ್ಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದೆ. ಆದರೆ, ರಾಜ್ಯ ಸರಕಾರ ಸಿಬಿಐ ತನಿಖೆಯನ್ನು ಕೇಂದ್ರ ಸರಕಾರ ದುರುಪಯೋಗಪಡಿಸಿಕೊಳ್ಳುತ್ತದೆ ಅನ್ನುವುದೇ ನಿಜವಾಗುವುದಾದರೆ ರಾಜ್ಯ ಸರಕಾರ ಲೋಕಾಯುಕ್ತ ತನಿಖಾ ಸಂಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ ಎಂಬ ಖಾತರಿ ಏನು ಎಂದು ಪ್ರಶ್ನಿಸಿದರು.

ಅಕ್ರಮ ಗಣಿಗಾರಿಕೆ ವಿವಾದದಲ್ಲಿ ರೋಸಿ ಹೋಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಮನಸ್ಸಿದೆ. ಆದರೆ ಕೆಲವರ ಒತ್ತಡಕ್ಕೆ ಮಣಿದು ಸಿಬಿಐಗೆ ವಹಿಸಲು ಮುಂದಾಗುತ್ತಿಲ್ಲ ಎಂದರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಬುಧವಾರ 69ನೇ ಹುಟ್ಟುಹಬ್ಬ ಆಚರಿಸಿಕೊಂಡ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆಯಿಂದ ಸಾವಿರಾರು ಕೋಟಿ ರೂಪಾಯಿಗಳು ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟಾಗಿರುವ ಬಗ್ಗೆ ಮುಖ್ಯಮಂತ್ರಿಯವರಿಗೆ ಅರಿವಿದೆ. ಈ ವಿವಾದವನ್ನು ಸಿಬಿಐಗೆ ವಹಿಸುವ ಮನಸ್ಸೂ ಕೂಡ ಅವರಿಗಿದೆ. ಆದರೆ ಕೆಲವರ ಒತ್ತಡಕ್ಕೆ ಸಿಲುಕಿರುವ ಮುಖ್ಯಮಂತ್ರಿಗಳು ಸಿಬಿಐ ತನಿಖೆಗೆ ಮುಂದಾಗುತ್ತಿಲ್ಲ ಎಂದು ದೂರಿದರು.

ಅಕ್ರಮ ಗಣಿಗಾರಿಕೆ ಕುರಿತಂತೆ ಆರೋಪ-ಪ್ರತ್ಯಾರೋಪ ಮಾಡುವುದರ ಬದಲು ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಸತ್ಯಾಂಶ ಹೊರಬೀಳಲಿದೆ. ಯಾರೇ ತಪ್ಪಿತಸ್ಥರಾದರೂ ಶಿಕ್ಷೆಯಾಗುತ್ತದೆ. ಹಾಗಿದ್ದ ಮೇಲೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಬಿಜೆಪಿಗೆ ಅಂಜಿಕೆ ಯಾಕೆ ಎಂದು ಪ್ರಶ್ನಿಸಿದರು.
ಸಂಬಂಧಿತ ಮಾಹಿತಿ ಹುಡುಕಿ