ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭಾಷೆ, ಸಂಸ್ಕೃತಿಗಾಗಿ ಹೋರಾಡುವ ಅವಶ್ಯಕತೆ ಇದೆ: ಹೆಗ್ಗಡೆ (Veerendra heggade | Dharmasthala | Dharwad | Kannada Litarature)
Bookmark and Share Feedback Print
 
ಕನ್ನಡ ಸಂಸ್ಕೃತಿ ಹಾಗೂ ಕನ್ನಡಕ್ಕಾಗಿ ಇಂದು ಹೆಚ್ಚು ಹೋರಾಟ ಮಾಡುವ ಅವಶ್ಯಕತೆ ಉಂಟಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದರು.

ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ 121ನೇ ಸಂಸ್ಥಾಪನಾ ದಿನಾಚರಣೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಆಂಗ್ಲ ಸಂಸ್ಕೃತಿ ನಮ್ಮ ಸಂಸ್ಕೃತಿಯನ್ನು ಬದಲಾಯಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕನ್ನಡದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸದಿರುವುದು ವಿಷಾದದ ಸಂಗತಿ ಎಂದ ಅವರು, ಯುವಕರು ಆಂಗ್ಲ ಸಂಸ್ಕೃತಿಯನ್ನು ಹೆಚ್ಚು ಅವಲಂಬಿಸಿರುವುದರಿಂದ ಅವರಿಗೆ ಕನ್ನಡದ ಅರಿವು ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ಅವರು ಕನ್ನಡ ಪುಸ್ತಕ, ಕನ್ನಡ ಪತ್ರಿಕೆಗಳನ್ನು ಹೆಚ್ಚು ಬಳಸುವುದು ಅತಿ ಸೂಕ್ತ ಎಂದು ಸಲಹೆ ನೀಡಿದರು.

ಈ ನಾಡಿನ ಸಂಸ್ಕೃತಿಯನ್ನು ಉಳಿಸಿ-ಬೆಳೆಸುವವಲ್ಲಿ ಯುವ ಜನತೆಯ ಪಾತ್ರ ಅತಿ ಮಹತ್ವದ್ದಾಗಿದೆ. ಕನ್ನಡ ಚಟುವಟಿಕೆ ಹಾಗೂ ಚಳವಳಿಗಳು ನಡೆಯುವಲ್ಲಿ ಯುವ ಜನರು ಭಾಗವಹಿಸಿ ಕನ್ನಡದ ಉಳಿವಿಗಾಗಿ ಕೆಲಸ ಮಾಡಬೇಕಾಗಿದೆ. ಒಟ್ಟಾರೆ ಕನ್ನಡ ಸಂಸ್ಕೃತಿ ಹಾಗೂ ಭಾಷೆಯ ಉಳಿವಿಗಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ