ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ರೇವಣ್ಣ (Revanna | Yeddyurappa | BJP | JDS | Ugrappa | Janardana Reddy)
Bookmark and Share Feedback Print
 
ಅಕ್ರಮ ಅದಿರು ಸಾಗಣೆ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ವಹಿಸುವ ಮುನ್ನ ನೈತಿಕ ಹೊಣೆ ಹೊತ್ತು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಲ್‌ಪಿ ನಾಯಕ ಎಚ್.ಡಿ.ರೇವಣ್ಣ ಆಗ್ರಹಿಸಿದ್ದಾರೆ.

ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಮುಖಂಡರೂ ಅಕ್ರಮ ಗಣಿಗಾರಿಕೆಯಲ್ಲಿ ಭಾಗವಹಿಸಿದ್ದರೆ, ಸಿಬಿಐ ಅಥವಾ ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಲಿ ಎಂದು ಸವಾಲು ಹಾಕಿದರು.

ರಾಜ್ಯದಿಂದ ಅಕ್ರಮವಾಗಿ ಅದಿರು ಸಾಗಣೆಯಾಗಿದೆ ಎಂದು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಹೀಗಿದ್ದೂ ಆರೋಪ ಮಾಡಲು ಕಾಂಗ್ರೆಸ್ ಮುಖಂಡ ಉಗ್ರಪ್ಪ ಯಾವ ದಾಖಲೆ ಒದಗಿಸಬೇಕು. ಉಗ್ರಪ್ಪ ಗಣಿಗಾರಿಕೆಯಲ್ಲಿ ತೊಡಗಿದ್ದಾರೆ, ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪವಿದ್ದರೆ, ಆ ಬಗ್ಗೆಯೂ ತನಿಖೆ ನಡೆಸಲಿ, ಅದು ಬಿಟ್ಟು ಬೆದರಿಕೆ ಹಾಕುವ ಅಗತ್ಯವಿಲ್ಲ ಎಂದರು.

ರೆಡ್ಡಿ ಸಹೋದರರನ್ನು ಮಟ್ಟ ಹಾಕುವ ಉದ್ದೇಶದಿಂದ ಸದನದಲ್ಲಿ ಈ ವಿಷಯ ಪ್ರಸ್ತಾಪಿಸುವಂತೆ ಕುಮ್ಮಕ್ಕು ನೀಡಿದ ಮುಖ್ಯಮಂತ್ರಿ, ಇದೀಗ ಪೇಚಿಗೆ ಸಿಲುಕಿಕೊಂಡಿದ್ದಾರೆ ಎಂದ ಅವರು, ಬಳ್ಳಾರಿಯಿಂದಲೇ ಬೇಲೆಕೇರಿ ಮತ್ತು ಕಾರವಾರ ಬಂದರಿಗೆ ಸಂಪೂರ್ಣ ಅದಿರು ಸಾಗಣೆಯಾಗಿದೆ. ಇದಕ್ಕೆ ಅವಕಾಶ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ, ತಮ್ಮ ಅಕ್ರಮ ಬಹಿರಂಗವಾಗುತ್ತದೆ ಎಂಬ ಉದ್ದೇಶದಿಂದ ಸಿಎಂ ಹಿಂಜರಿಯುತ್ತಿದ್ದಾರೆ. ಅಕ್ರಮ ತಡೆಗಟ್ಟಲು ಗಣಿ ನಿಗಮವನ್ನಾದರೂ ಸ್ಥಾಪಿಸಲಿ, ಏನನ್ನಾದರೂ ಮಾಡಿಕೊಳ್ಳಲಿ, ಆದರೆ ಈಗಾಗಲೇ ನಡೆದ ಅಕ್ರಮದ ಬಗ್ಗೆ ತನಿಖೆ ನಡೆಸಲಿ ಎಂದು ಸಲಹೆ ನೀಡಿದರು.
ಸಂಬಂಧಿತ ಮಾಹಿತಿ ಹುಡುಕಿ