ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಆಸರೆ ಮನೆ ಕಳಪೆಯಾದರೆ ಕಠಿಣ ಕ್ರಮ: ಕಟ್ಟಾ ಸುಬ್ರಮಣ್ಯ (Katta subramanya | Bagalakote | Badami | Asare mane)
Bookmark and Share Feedback Print
 
ಕಾಮಗಾರಿ ಕಳಪೆ ಕಂಡು ಬಂದಲ್ಲಿ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಸರೆ ಮನೆ ನಿರ್ಮಾಣದ ಉಸ್ತುವಾರಿ ಹಾಗೂ ವಾರ್ತಾ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದರು.

ಜಿಲ್ಲೆಯ ಬಾದಾಮಿ ತಾಲೂಕಿನ ಕಳಸ, ಸುಳ್ಯ ಹಾಗೂ ಚೊಳಚಗುಡ್ಡದಲ್ಲಿ ನಿರ್ಮಿಸುತ್ತಿರುವ ಆಸರೆ ಮನೆಗಳ ಕಾಮಗಾರಿಯನ್ನು ಗುರುವಾರ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು.

ಆಸರೆ ಮನೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಡೆದಿರುವ ಬಗೆಗೆ ಇದುವರೆಗೂ ಯಾವುದೇ ದೂರು ಬಂದಿಲ್ಲ. ಒಂದು ವೇಳೆ ದೂರು ಬಂದಲ್ಲಿ ತನಿಖೆ ನಡೆಸಿ ಸಂಬಂಧಪಟ್ಟವರು ಯಾರೇ ಇದ್ದರೂ ಶಿಕ್ಷೆ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಾದಾಮಿ ತಾಲೂಕಿನ ನಾನಾ ಕಡೆಗಳಲ್ಲಿ ನಿರ್ಮಿಸುತ್ತಿರುವ ಆಸರೆ ಮನೆಗಳ ಪರಿಶೀಲನೆ ನಡೆಸಿದ್ದು, ನಿರ್ಮಾಣ ಕಾರ್ಯ ಚೆನ್ನಾಗಿ ನಡೆದಿದೆ. ಕಟ್ಟಡಗಳು ಗುಣಮಟ್ಟ ಹೊಂದಿವೆ. ಕಾಮಗಾರಿ ತಮಗೆ ಸಂಪೂರ್ಣ ಸಮಾಧಾನ ತಂದಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ನಾನಾ ಕಡೆಗಳಲ್ಲಿ 52 ಸಾವಿರ ಮನೆಗಳನ್ನು ನಿರ್ಮಿಸುವ ಜವಾಬ್ದಾರಿಯನ್ನು ಏಜೆನ್ಸಿಗಳಿಗೆ ವಹಿಸಲಾಗಿದೆ. ಈಗಾಗಲೇ 28 ಸಾವಿರ ಮನೆಗಳ ಕಾರ್ಯ ಪ್ರಗತಿಯಲ್ಲಿದೆ. ಕಾಮಗಾರಿ ವೇಗ ಇನ್ನಷ್ಟು ಹೆಚ್ಚಬೇಕಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಚುರುಕಾಗಿ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ