ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗಣಿ ಸಮರ-ಪಾದಯಾತ್ರೆ ಯಾವ ವ್ಯಕ್ತಿ ವಿರುದ್ಧವಲ್ಲ: ಕಾಂಗ್ರೆಸ್ (Desh pandy | Congress | BJP | Yeddyurappa | JDS | Bangalore)
Bookmark and Share Feedback Print
 
ರಾಜ್ಯ ಸರಕಾರದ ಆಡಳಿತ ಯಂತ್ರ ನಿಷ್ಕ್ರಿಯವಾಗಿದ್ದು, ನಾಡ ರಕ್ಷಣಾ ನಡಿಗೆ ಎಂಬ ಧ್ಯೇಯದೊಂದಿಗೆ ಗಣಿ ಧಣಿಗಳ ವಿರುದ್ಧ ಸಮರ ಸಾರಿರುವುದಾಗಿ ಘೋಷಿಸಿರುವ ಕಾಂಗ್ರೆಸ್ ಜು.25ರಿಂದ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಲು ಸಕಲ ಸಿದ್ದತೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಮತ್ತು ಸಿದ್ದರಾಮಯ್ಯ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಾದಯಾತ್ರೆ ಯಾವ ವ್ಯಕ್ತಿಯ ವಿರುದ್ಧವಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಕೋಮುವಾದಿ ಸರಕಾರದಿಂದ ಜನತೆಗೆ ಮುಕ್ತಿ ಬೇಕಾಗಿದೆ. ಅಲ್ಲದೇ ಅಕ್ರಮ ಗಣಿಗಾರಿಕೆಯಿಂದ ರಾಜ್ಯದ ಸಂಪತ್ತು ಲೂಟಿಯಾಗುತ್ತಿರುವುದರ ಬಗ್ಗೆ ಜನತೆಗೆ ಮಾಹಿತಿ ನೀಡುವ ಸಲುವಾಗಿ ಜು.25ರಿಂದ ಆಗಸ್ಟ್ 9ರವರೆಗೆ ಪಾದಯಾತ್ರೆ ನಡೆಯಲಿದೆ ಎಂದು ವಿವರಿಸಿದರು.

ಜು.25ರಂದು ಬೆಳಿಗ್ಗೆ ನಗರದ ಶೇಷಾದ್ರಿ ರಸ್ತೆಯಲ್ಲಿರುವ ಸ್ವಾತಂತ್ರ್ಯ ಉದ್ಯಾನದಿಂದ ಪಾದಯಾತ್ರೆ ಆರಂಭವಾಗಿ, ಆ.9ರಂದು ಬಳ್ಳಾರಿಯಲ್ಲಿ ಮುಕ್ತಾಯಗೊಳ್ಳಲಿದೆ ಎಂದರು.

ಖನಿಜ ಸಂಪತ್ತು ಲೂಟಿ ತಡೆಗೆ ಕಠಿಣ ಕ್ರಮ ಕೈಗೊಂಡು, ಅಕ್ರಮ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ಒತ್ತಾಯಿಸಿ ಈ ಪಾದಯಾತ್ರೆ ನಡೆಸಲಾಗುತ್ತಿದೆ. ಇದರ ಹಿಂದೆ ಯಾವುದೇ ರಾಜಕೀಯ ದುರುದ್ದೇಶ ಇಲ್ಲ ಎಂದು ತಿಳಿಸಿದರು.

ಬಳ್ಳಾರಿಗೆ ಬನ್ನಿ ನೋಡ್ಕೋತೀವಿ ಎಂದು ಗಣಿ ಧಣಿಗಳು ಹಾಕಿರುವ ಸವಾಲನ್ನು ಸ್ವೀಕರಿಸಿದ್ದು, ನಾಡಿನ ಸಂಪತ್ತು ಹಾಗೂ ಪ್ರಜಾತಂತ್ರ ವ್ಯವಸ್ಥೆಯನ್ನು ಕಾಪಾಡಲೆಂದೇ ಈ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ