ರಾಜ್ಯದ ನೆರೆ ಸಂತ್ರಸ್ತರಿಗೆ ಗಣಿ ಮಾಲೀಕರಿಂದ ಬಳ್ಳಾರಿ, ಕೊಪ್ಪಳ ಮತ್ತು ಗದಗ ಜಿಲ್ಲೆಯಲ್ಲಿ 10 ಸಾವಿರ ಮನೆ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಜಿ.ಕರುಣಾಕರ ರೆಡ್ಡಿ ಹೇಳಿದರು.
ಪಟ್ಟಣದಲ್ಲಿ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಕೆಲ ದಾನಿಗಳು ರಾಜ್ಯದ ನಾನಾ ಜಿಲ್ಲೆಗಳಲ್ಲಿ ಆಸರೆ ಮನೆ ನಿರ್ಮಿಸಲು ಮುಂದಾಗಿ ಸರಕಾರದ ಜತೆ ಒಡಂಬಡಿಕೆ ಮಾಡಿಕೊಂಡಿದ್ದರು.
ಅದರಲ್ಲಿ ಕೆಲವರು ಇನ್ನೂ ಕಾಮಗಾರಿ ಆರಂಭಿಸಿಲ್ಲ. ಅಂಥವರಿಗೆ ತಮ್ಮ ಸ್ಪಷ್ಟ ನಿಲುವು ತಿಳಿಸಲು ಸೂಚಿಸಲಾಗಿದೆ. ಜುಲೈ ಅಂತ್ಯದೊಳಗೆ ಅವರು ಮನೆ ನಿರ್ಮಾಣಕ್ಕೆ ಮುಂದಾಗದಿದ್ದರೆ ಸರಕಾರವೇ ಆ ಮನೆಗಳನ್ನು ನಿರ್ಮಿಸಲಿದೆ. ಸಿಎಂ ಪರಿಹಾರ ನಿಧಿಯಲ್ಲಿರುವ 418 ಕೋಟಿ ರೂ.ಗಳಲ್ಲಿ ಸಂತ್ರಸ್ತರಿಗೆ ಮನೆ ನಿರ್ಮಿಸಲು ಉದ್ದೇಶಿಲಾಗಿದೆ ಎಂದರು.ಸಚಿವ ಶ್ರೀರಾಮುಲು ಆವೇಶದಲ್ಲಿ ಬಳ್ಳಾರಿಯಿಂದ ಮೈಸೂರುವರೆಗೆ ಪಾದಯಾತ್ರೆ ನಡೆಸುವುದಾಗಿ ಹೇಳಿರಬಹುದು ಎಂದು ಸಚಿವ ಕರುಣಾಕರ ರೆಡ್ಡಿ ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಈಶ್ವರಪ್ಪ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದು, ವರಿಷ್ಠರ ತೀರ್ಮಾನಕ್ಕೆ ತಾವು ಬದ್ಧ ಎಂದರು.