ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪಾದಯಾತ್ರೆ ವೇಳೆ ಗಲಾಟೆಯಾದ್ರೆ ಸರ್ಕಾರ ಹೊಣೆ: ಸಿದ್ದು (Congress | Siddaramaiah | BJP | JDS | Bharadwaj,)
Bookmark and Share Feedback Print
 
ಅಕ್ರಮ ಗಣಿಗಾರಿಕೆ ವಿರುದ್ಧ ಭಾನುವಾರದಿಂದ ಕಾಂಗ್ರೆಸ್ ನಡೆಸುವ ಪಾದಯಾತ್ರೆ ವೇಳೆ ಕಾನೂನು ಸುವ್ಯವಸ್ಥೆಗೆ ಅಡ್ಡಿಯಾದರೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರನ್ನು ಭೇಟಿಯಾಗಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪಾದಯಾತ್ರೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಹೇಳಿದರು.

ಪಾದಯಾತ್ರೆ ವೇಳೆ ನಡೆಸುವ 8-10 ಸಾರ್ವಜನಿಕ ಸಭೆಗಳು ಪಾದಯಾತ್ರೆ ಹಾದು ಹೋಗುವ ಹಾದಿ ಸೇರಿದಂತೆ ಎಲ್ಲ ವಿವರದ ಪತ್ರವನ್ನು ಕಳುಹಿಸಿದ್ದು, ಸರ್ಕಾರ ಸೂಕ್ತ ಬಂದೋಬಸ್ತ್ ಮಾಡಬೇಕಾಗಿದೆ ಎಂದರು.

ಪಾದಯಾತ್ರೆ ವೇಳೆ ಅಕ್ರಮ ಗಣಿಗಾರಿಕೆ, ನೆರೆ ಪರಿಹಾರ ವಿಳಂಬ, ವಿದ್ಯುತ್ ಕೊರತೆ, ಪಡಿತರ ಚೀಟಿ ನಿರ್ಲಕ್ಷ್ಯ, ಬರಗಾಲ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲ ಸೇರಿದಂತೆ ಹಲವು ಸರಕಾರದ ಜನ ವಿರೋಧಿ ನೀತಿಗಳನ್ನು ಜನರ ಮುಂದಿಡಲಾಗುವುದು ಎಂದು ತಿಳಿಸಿದರು. ಕಾವೇರಿ ಜಲಾಶಯಗಳಲ್ಲಿ ನೀರಿನ ಕೊರತೆ ಇರುವಾಗ ತಮಿಳುನಾಡಿಗೆ ನೀರು ಬಿಡುವುದಾದರೂ ಹೇಗೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ