ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾಂಗ್ರೆಸ್ ಮೊದ್ಲು ಕಬ್ಬಿಣ ಅದಿರು ರಫ್ತು ನಿಷೇಧಿಸ್ಲಿ: ಎಚ್‌ಡಿಕೆ (Kumaraswamy | Karnataka | illegal mining | padyatra | ban export)
Bookmark and Share Feedback Print
 
ಅಕ್ರಮ ಗಣಿಗಾರಿಕೆ ವಿರುದ್ಧ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ನಡೆಸುತ್ತಿರುವ ಪಾದಯಾತ್ರೆ ಕುರಿತು ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ, ಮೊದಲು ಕಾಂಗ್ರೆಸ್ ಪಕ್ಷ ಕೇಂದ್ರದ ಅಧಿಕಾರವನ್ನು ಉಪಯೋಗಿಸಿಕೊಂಡು ರಾಜ್ಯದಲ್ಲಿನ ಕಬ್ಬಿಣದ ಅದಿರು ರಫ್ತು ನಿಷೇಧಿಸಲು ಮುಂದಾಗಲಿ ಎಂದು ತಿರುಗೇಟು ನೀಡಿದ್ದಾರೆ.

ಅಕ್ರಮ ಗಣಿಗಾರಿಕೆ ಮತ್ತು ರೆಡ್ಡಿ ಸಹೋದರರ ಸವಾಲಿಗೆ ತಿರುಗೇಟು ಎಂಬಂತೆ ಕಾಂಗ್ರೆಸ್ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸುತ್ತಿದೆ. ಆದರೆ ಕಾಂಗ್ರೆಸ್ ಪಕ್ಷ ಮತ್ತೆ ತಪ್ಪನ್ನು ಪುನರಾವರ್ತಿಸುತ್ತಿದೆ. ಆ ನಿಟ್ಟಿನಲ್ಲಿ ಕೇಂದ್ರ ಸರಕಾರದ ಮೇಲೆ ಒತ್ತಡ ತಂದು ರಾಜ್ಯದಿಂದ ಅಕ್ರಮವಾಗಿ ರಫ್ತಾಗುತ್ತಿರುವ ಕಬ್ಬಿಣ ಅದಿರು ತಡೆಗೆ ಮುಂದಾಗಲಿ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅಧಿಕಾರದಲ್ಲಿದೆ. ರಾಜ್ಯದ ಕಾಂಗ್ರೆಸ್ ಮುಖಂಡರು ಕೇಂದ್ರದ ಮೇಲೆ ಒತ್ತಡ ತಂದು ನೆರೆಯ ಆಂಧ್ರಪ್ರದೇಶ, ಕರ್ನಾಟಕ ಹಾಗೂ ಗೋವಾ ಬಂದರಿನ ಮೂಲಕ ರಫ್ತಾಗುತ್ತಿರುವ ಕಬ್ಬಿಣ ಅದಿರು ತಡೆಗೆ ಮುಂದಾಗಲಿ ಎಂದು ಸವಾಲು ಹಾಕಿದರು.

ಬಳ್ಳಾರಿ ಸಚಿವರ ಹಾಗೂ ಅಕ್ರಮ ಗಣಿಗಾರಿಕೆ ವಿರುದ್ಧ ಕಾಂಗ್ರೆಸ್ ಪಕ್ಷ ಪಾದಯಾತ್ರೆ ನಡೆಸುತ್ತಿದ್ದು, ಆಗೋಸ್ಟ್ 9ರಂದು ಪಾದಯಾತ್ರೆ ಬಳ್ಳಾರಿಯಲ್ಲಿ ಮುಕ್ತಾಯಗೊಳ್ಳಲಿದೆ. ಆಡಳಿತಾರೂಢ ಸರಕಾರ ಪ್ರವಾಸೋದ್ಯಮ ಸಚಿವ ಜಿ.ಜನಾರ್ದನ ರೆಡ್ಡಿ, ಕಂದಾಯ ಸಚಿವ ಜಿ.ಕರುಣಾಕರ ರೆಡ್ಡಿ, ಶಾಸಕ ಜಿ.ಸೋಮಶೇಖರ ರೆಡ್ಡಿ ಅಕ್ರಮ ಗಣಿಗಾರಿಕೆ ಮತ್ತು ಕೋಟ್ಯಂತರ ರೂಪಾಯಿ ಅಕ್ರಮ ಅದಿರನ್ನು ರಫ್ತು ಮಾಡಿರುವುದಾಗಿ ಕಾಂಗ್ರೆಸ್ ಆರೋಪಿಸಿದೆ.

ಏತನ್ಮಧ್ಯೆ, ಪ್ರತಿಪಕ್ಷಗಳ ಆರೋಪವನ್ನು ಸಾರಸಗಟಾಗಿ ತಳ್ಳಿಹಾಕಿರುವ ಸಚಿವರು ಮತ್ತು ಮುಖ್ಯಮಂತ್ರಿಗಳು, ಅಕ್ರಮ ಗಣಿ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲು ನಿರಾಕರಿಸಿದ್ದಾರೆ. ಇದೀಗ ಸರಕಾರದ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಆದರೆ ಕಾಂಗ್ರೆಸ್ ಪಾದಯಾತ್ರೆ ವಿಫಲವಾಗಿದ್ದು, ಇದರಲ್ಲಿ ಜನರು ಸ್ವಯಂಪ್ರೇರಿತರಾಗಿ ಪಾಲ್ಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಕೇವಲ ಪಕ್ಷದ ಕಾರ್ಯಕರ್ತರು ಮಾತ್ರ ಭಾಗವಹಿಸಿದ್ದಾರೆ. ಆ ನೆಲೆಯಲ್ಲಿ ಜನರೇ ಸ್ವಯಂ ಪ್ರೇರಿತರಾಗಿ ಯಾರೂ ಪಾಲ್ಗೊಂಡಿಲ್ಲ ಎಂದರು. ಬಿಜೆಪಿ ಸರಕಾರದ ದುರಾಡಳಿತ ಮತ್ತು ಅಕ್ರಮ ಗಣಿಗಾರಿಕೆ ವಿರುದ್ಧ ಜೆಡಿಎಸ್ ಕೂಡಲೇ ರಾಲಿಯನ್ನು ಹಮ್ಮಿಕೊಳ್ಳಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ