ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಕ್ರಮ ಗಣಿ-ದೇವೇಗೌಡರ ಸಲಹೆ ಕೇಳ್ತೇನೆ: ಯಡಿಯೂರಪ್ಪ (Deve gowda | JDS | Congress | BJP | Yeddyurappa | KPCC)
Bookmark and Share Feedback Print
 
ರಾಜ್ಯದಲ್ಲಿನ ಅಕ್ರಮ ಗಣಿಗಾರಿಕೆ ತಡೆಯುವ ಸಂಬಂಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಲಹೆಯನ್ನೂ ಸಹ ಪಡೆಯುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಗೌಡರ ಜತೆ ನೇರವಾಗಿ ಅಥವಾ ದೂರವಾಣಿ ಮೂಲಕ ಮಾತುಕತೆ ನಡೆಸಿ ಸಲಹೆ, ಸೂಚನೆ ಪಡೆಯಲಾಗುವುದು ಎಂದರು.

ಕಾಂಗ್ರೆಸ್‌ಗೆ ಪ್ರತಿಯಾಗಿ ಪಾದಯಾತ್ರೆ: ಅಕ್ರಮ ಗಣಿಗಾರಿಕೆ ವಿರುದ್ಧ ಕಾಂಗ್ರೆಸಿಗರು ನಡೆಸುತ್ತಿರುವ ಪಾದಯಾತ್ರೆಗೆ ಪ್ರತಿಯಾಗಿ ಬಿಜೆಪಿ ವತಿಯಿಂದ ಯಾತ್ರೆ ಕೈಗೊಳ್ಳುವುದಾಗಿ ಹೇಳುವ ಮೂಲಕ ಮುಖ್ಯಮಂತ್ರಿಗಳು ಪ್ರತಿಪಕ್ಷಗಳಿಗೆ ಸಡ್ಡು ಹೊಡೆದಿದ್ದಾರೆ.

ಪಾದಯಾತ್ರೆಯಲ್ಲಿ ತಮ್ಮ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿರುವ ಕಾಂಗ್ರೆಸ್ ಮುಖಂಡರ ಟೀಕೆಗಳಿಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ತಾವು ಕೂಡ 25 ವರ್ಷ ಪಾದಯಾತ್ರೆ ನಡೆಸಿದ ನಂತರವೇ ಜನಾದೇಶ ಪಡೆದು ಮುಖ್ಯಮಂತ್ರಿಯಾಗಿದ್ದೇನೆ ಎಂದು ತಿರುಗೇಟು ನೀಡಿದರು.

ಜನಾದೇಶಕ್ಕೆ ತೆರಳುವಂತೆ ಕಾಂಗ್ರೆಸಿಗರು ತಮಗೆ ಸವಾಲು ಹಾಕಿದ್ದಾರೆ. ಖಂಡಿತವಾಗಿಯೂ ಮೂರು ವರ್ಷಗಳ ನಂತರ ಜನಾದೇಶಕ್ಕೆ ತೆರಳುತ್ತೇವೆ. ಆವರೆಗೂ ಕಾಂಗ್ರೆಸಿಗರು ಪಾದಯಾತ್ರೆ ಮಾಡಿಕೊಂಡೇ ಇರಲಿ. ಮನಸಿಗೆ ಬಂದಂತೆ ಕುಣಿದು ಕುಪ್ಪಳಿಸಿ ಮೈ ಕೈ ನೋವು ಮಾಡಿಕೊಳ್ಳಲಿ ಎಂದು ವ್ಯಂಗ್ಯವಾಡಿದರು.

ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸಿಗರಿಗೆ ಜನರು ಛೀಮಾರಿ ಹಾಕುತ್ತಿದ್ದಾರೆ. ಆದರೆ, ತಾವು ಅದಕ್ಕೆ ಯಾವುದೇ ರೀತಿಯ ಆಕ್ಷೇಪ ವ್ಯಕ್ತಪಡಿಸುವುದಿಲ್ಲ. ಯಾತ್ರೆ ತೆರಳುವ ಮಾರ್ಗದಲ್ಲಿ ಅಗತ್ಯವಿರುವ ಸಹಕಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಈ ಸಂದರ್ಭದಲ್ಲಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ