ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಳ್ಳಾರಿಗೆ ಕೆಟ್ಟ ಹೆಸರು ತರಬೇಡಿ: ಕಾಂಗ್ರೆಸ್‌ಗೆ ರೆಡ್ಡಿ (Janardana Reddy | Karunakar Reddy | BJP | Congress | KPCC)
Bookmark and Share Feedback Print
 
ಅಕ್ರಮ ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ನಮ್ಮ ಬಿಜೆಪಿ ಸರಕಾರ ಜನಮೆಚ್ಚುವ ರೀತಿಯಲ್ಲಿ, ಭಗವಂತ ಮೆಚ್ಚುವ ರೀತಿಯಲ್ಲಿ ಕ್ರಮ ಕೈಗೊಂಡಿದೆ. ಇದನ್ನು ಕಾಂಗ್ರೆಸ್ ಮುಖಂಡರು ಈಗಲಾದರೂ ಅರ್ಥ ಮಾಡಿಕೊಂಡು ಪಾದಯಾತ್ರೆಯನ್ನು ನಿಲ್ಲಿಸಲಿ ಎಂದು ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಬಳ್ಳಾರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ನಡವಳಿಕೆಯನ್ನು ಹಿಗ್ಗಾ-ಮುಗ್ಗಾ ಟೀಕಿಸಿದರು. ಶತಮಾನಗಳಷ್ಟು ಇತಿಹಾಸವಿರುವ ಕಾಂಗ್ರೆಸ್ ಮುಖಂಡರು ನಡೆದುಕೊಳ್ಳುತ್ತಿರುವ ರೀತಿ-ನೀತಿ ಸಾರ್ವಜನಿಕರಲ್ಲಿ ಅಸಹ್ಯ ಹುಟ್ಟಿಸಿದೆ ಎಂದರು.

ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕುವಲ್ಲಿ ನಮ್ಮ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಹತ್ತು ಬಂದರುಗಳಲ್ಲಿ ಅದಿರು ರಫ್ತು ನಿಷೇಧ ಮಾಡಿದ್ದಾರೆ. ಹಾಗಾಗಿ ಕಾಂಗ್ರೆಸ್ ಮುಖಂಡರು ಈಗಲಾದರು ಅರ್ಥಮಾಡಿಕೊಳ್ಳಿ. ದಯವಿಟ್ಟು ಬಳ್ಳಾರಿಗೆ ಕಪ್ಪು ಚುಕ್ಕೆ ತರಬೇಡಿ. ಪಾದಯಾತ್ರೆ ಕೈಬಿಡಿ ಎಂದು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.

ಹೆದ್ದಾರಿಯಲ್ಲಿ ಡ್ಯಾನ್ಸ್ ಮಾಡಿಕೊಂಡು, ಕುಣಿದುಕೊಂಡು ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ಮುಖಂಡರ ನಡವಳಿಕೆಗಳನ್ನು ಮಹಾತ್ಮ ಗಾಂಧಿ ಕಣ್ಣಾರೆ ಕಂಡಿದ್ದರೆ ಕಣ್ಣೀರು ಹಾಕುತ್ತಿದ್ದರು. ಅವರ ಆತ್ಮ ಕೂಡ ನೋಯುವಂತೆ ಕಾಂಗ್ರೆಸ್ ಮುಖಂಡರು ತಮ್ಮ ನಡವಳಿಕೆಯಿಂದ ಮಾಡಿದ್ದಾರೆ ಎಂದು ದೂರಿದರು.

ಇದಕ್ಕೆ ಅವರು ದೇಶದ, ರಾಜ್ಯದ ಜನರ ಕ್ಷಮೆ ಕೂಡ ಕೇಳಿದರೆ ತಪ್ಪಲ್ಲ. ಅಕ್ರಮ ಗಣಿಗಾರಿಕೆಯನ್ನು ಕಾಂಗ್ರೆಸ್ ಮುಖಂಡರೇ ನಿರಂತರವಾಗಿ ಮಾಡಿಕೊಂಡು, ಚೆನ್ನಾಗಿ ಉಂಡು, ತೇಗಿ ಈಗ ಅಕ್ರಮ ಗಣಿಗಾರಿಕೆ ಪಟ್ಟವನ್ನು ನಮಗೆ ಕಟ್ಟಲು ಹೊರಟಿದ್ದಾರೆ. ಇದು ಯಾವ ನ್ಯಾಯ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ