ಕಾಂಗ್ರೆಸ್ ಮುಖಂಡರು ಬಳ್ಳಾರಿ ಪಾದಯಾತ್ರೆಯನ್ನು ರಸ್ತೆಯಲ್ಲಿ ಡ್ಯಾನ್ಸ್ ಮಾಡಿರುವುದಕ್ಕಿಂತ ಸಚಿವ ಶ್ರೀರಾಮುಲು ಕೇಶ ಮುಂಡನವೇ ಒಳ್ಳೆಯ ಕೆಲಸ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿರುವ ಮುಖ್ಯಮಂತ್ರಿಗಳ ಸ್ವಂತ ನಿವಾಸದಲ್ಲಿ ಶುಕ್ರವಾರ ನಡೆದ ಮುಖಂಡರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಕಿಡಿಕಾರಿದರು.
ಪಾದಯಾತ್ರೆ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಂತಹ ಜವಾಬ್ದಾರಿ ಹುದ್ದೆಯಲ್ಲಿರುವ ಸಿದ್ದರಾಮಯ್ಯ ಡ್ಯಾನ್ಸ್ ಮಾಡುತ್ತಿರುವುದು ಅವರಿಗೆ ಶೋಭ ತರಲ್ಲ. ಇದಕ್ಕಿಂತ ಸಚಿವ ಶ್ರೀರಾಮುಲು ತಲೆ ಬೋಳಿಸಿಕೊಂಡಿರುವುದೇ ಒಳ್ಳೆಯ ಕೆಲಸ ಎಂದರು. ಅಕ್ರಮ ಗಣಿಗಾರಿಕೆ ತನಿಖೆಯನ್ನು ಸಿಬಿಐಗೆ ವಹಿಸಲು ನಾವು ದಡ್ಡರಲ್ಲ, ಇದನ್ನು ಸಿಬಿಐಗೆ ವಹಿಸುವ ಪ್ರಶ್ನೆಯೇ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.