ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕುರ್ಚಿ ಹೋದ್ರು ಅಕ್ರಮ ಗಣಿಗೆ ಅವಕಾಶ ಕೊಡಲ್ಲ: ಸಿಎಂ (BJP | Yeddyurappa | Congress | JDS | KPCC | Pada yathre)
Bookmark and Share Feedback Print
 
ಮುಖ್ಯಮಂತ್ರಿ ಗಾದಿ ಹೋದರು ತಲೆಕೆಡಿಸಿಕೊಳ್ಳಲ್ಲ, ಅಕ್ರಮ ಗಣಿಗಾರಿಕೆಗೆ ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ತಾಲೂಕಿನ ನಾಗವಲ್ಲಿಯಲ್ಲಿ ಏರ್ಪಡಿಸಿದ್ದ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು ಇಂದು-ನಿನ್ನೆಯದಲ್ಲ. ಕಳೆದ 10-12 ವರ್ಷಗಳಿಂದಲೂ ನಡೆಯುತ್ತಿದೆ. ರಾಜ್ಯದ ಉದ್ದಗಲಕ್ಕೂ ಹೋರಾಟ ನಡೆಸಿಯಾದರೂ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲಾಗುವುದು. ಈ ಬಗ್ಗೆ ಈಗಾಗಲೇ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮನವಿ ಮಾಡಿದ್ದೇನೆ. ಅವರು ಸಹ ರಾಜ್ಯದಲ್ಲಿ ಖನಿಜ ಪ್ರಾಧಿಕಾರ ಸ್ಥಾಪನೆಗೆ ಒಲವು ತೋರಿದ್ದಾರೆ.
ಇದು ಬಿಜೆಪಿ ಸರಕಾರಕ್ಕೆ ಸಂದ ಜಯ ಎಂದರು.

ಮುಂದಿನ ದಿನಗಳಲ್ಲಿ ವಿದೇಶಗಳಿಗೆ ಅಕ್ರಮ ಅದಿರು ರವಾನೆಯಾಗಬಾರದೆಂಬ ಉದ್ದೇಶದಿಂದ ಗಣಿ ರಫ್ತು ನಿಷೇಧ ಮಾಡಿದ್ದೇನೆ ಎಂದು ತಿಳಿಸಿದರು.

ಆದರೆ ವಿರೋಧ ಪಕ್ಷದವರು ನಡೆಸುತ್ತಿರುವ ಪಾದಯಾತ್ರೆಯಲ್ಲಿ ಕುಣಿದು ಕುಪ್ಪಳಿಸುತ್ತಿರುವುದು ಸರಿಯಲ್ಲ. ಇದು ಮಹಾತ್ಮಗಾಂಧೀಜಿಯವರ ಸತ್ಯಾಗ್ರಹಕ್ಕೆ ಅಗೌರವ ತೋರಿದಂತೆ. ಪಾದಯಾತ್ರೆಯಲ್ಲಿ ಡ್ಯಾನ್ಸ್ ಮಾಡುವುದು, ವ್ಯಂಗ್ಯ ಮಾಡುವುದನ್ನು ಬಿಟ್ಟು ರಾಮನಾಮ ಭಜನೆ ಮಾಡಲಿ ಎಂದು ಸಲಹೆ ನೀಡಿದರು.

ನಮ್ಮ ಸರಕಾರದ ವಿರುದ್ಧ ವಿರೋಧ ಪಕ್ಷದವರು ಏನೇ ಟೀಕೆ ಮಾಡಿದರೂ ಸರಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ. ನಮಗೆ ರಾಜ್ಯದ ಜನತೆಯ ಆಶೀರ್ವಾದ ಇದೆ ಎಂದ ಅವರು, ನಮ್ಮ ಸರಕಾರವೂ ಸಹ ರಾಜ್ಯದ ಜನತೆಯ ಪರವಾಗಿಯೇ ಇದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ