ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿಯಲ್ಲಿ ಯಾವುದೇ ಬಿಕ್ಕಟ್ಟಿಲ್ಲ, ಒಗ್ಗಟ್ಟಿದೆ: ಯಡಿಯೂರಪ್ಪ (BJP | Congress | JDS | Yeddyurappa | Janaradana Reddy | Renukacharya)
ಬಿಜೆಪಿಯಲ್ಲಿ ಯಾವುದೇ ಬಿಕ್ಕಟ್ಟಿಲ್ಲ, ಒಗ್ಗಟ್ಟಿದೆ: ಯಡಿಯೂರಪ್ಪ
ಮೈಸೂರು, ಸೋಮವಾರ, 2 ಆಗಸ್ಟ್ 2010( 11:51 IST )
ಒಂದೆಡೆ ಕಾಂಗ್ರೆಸ್ ಪಾದಯಾತ್ರೆ, ಮತ್ತೊಂದೆಡೆ ಬಿಜೆಪಿ ಶಾಸಕ, ಸಚಿವರೇ ರೆಡ್ಡಿ ಸಹೋದರರ ವಿರುದ್ಧ ಅಪಸ್ವರ ಎತ್ತುತ್ತಿರುವ ನಡುವೆಯೇ ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಭಾನುವಾರ ಮೈಸೂರಿಗೆ ಆಗಮಿಸಿದ್ದ ಅವರು, ನಾಡಿನ ಜನರ ಒಳಿತು ಹಾಗೂ ಅಭಿವೃದ್ದಿಯನ್ನು ಬಯಸಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಭಾರತೀಯ ಜನತಾ ಪಕ್ಷಕ್ಕೆ ಜನರ ಆಶೀರ್ವಾದ ಇದೆ. ಅಷ್ಟೇ ಅಲ್ಲ ಎಲ್ಲವನ್ನೂ ತ್ಯಾಗ ಮಾಡಿ ಅಭಿವೃದ್ದಿಗೆ ಒತ್ತು ನೀಡಲಾಗುತ್ತಿದೆ. ಸರಕಾರ ಮೂರು ವರ್ಷ ಆಡಳಿತ ಪೂರ್ಣಗೊಳಿಸುತ್ತದೆ. ಅದರಲ್ಲಿ ಯಾವುದೇ ಅನುಮಾನ ಬೇಡ ಎಂದರು.
ಭಾರತೀಯ ಜನತಾ ಪಕ್ಷದಲ್ಲಿ ಯಾವುದೇ ಬಿಕ್ಕಟ್ಟು, ಭಿನ್ನಾಭಿಪ್ರಾಯವಿಲ್ಲ.ರಾಜ್ಯದ ಅಭಿವೃದ್ದಿ ಮತ್ತು ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ಕೊಡಲು ಶಾಸಕರು, ಸಚಿವರು ಬದ್ದರಾಗಿದ್ದಾರೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಅಬಕಾರಿ ಸಚಿವ ರೇಣುಕಾಚಾರ್ಯ ಮತ್ತು ಬಣ ರೆಡ್ಡಿ ಸಹೋದರರ ವಿರುದ್ಧವೇ ಹೇಳಿಕೆಗಳನ್ನು ನೀಡುವ ಮೂಲಕ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು. ಮತ್ತೊಂದೆಡೆ ರಾಜ್ಯಾಧ್ಯಕ್ಷ ಈಶ್ವರಪ್ಪ, ಮುಖ್ಯಮಂತ್ರಿ ಯಡಿಯೂರಪ್ಪ ಆಗಾಗ ರೆಡ್ಡಿ ಬ್ರದರ್ಸ್ ವಿರುದ್ಧ ಅಸಮಾಧಾನ ಹೊರ ಹಾಕುತ್ತಿರುವುದು. ಪಕ್ಷದೊಳಗೆ ಅಸಮಾಧಾನದ ಹೊಗೆ ಬೂದಿ ಮುಚ್ಚಿದ ಕೆಂಡಂದಂತೆ ಆಗಿದೆ.