ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಫ್ತು ನಿಷೇಧಿಸಿದ ಮೇಲೆ ಕಾಂಗ್ರೆಸ್ ಪಾದಯಾತ್ರೆ ಯಾಕೆ?: ಸಿಎಂ (Congress | BJP | Yeddyurappa | JDS | Janardana Reddy | Padayathre)
Bookmark and Share Feedback Print
 
ಅಕ್ರಮ ಗಣಿಗಾರಿಕೆ ಸಂಬಂಧ ಹೋರಾಡಲು ಕಾಂಗ್ರೆಸ್‌ಗೆ ನೈತಿಕ ಹಕ್ಕಿಲ್ಲ. ಬಿಜೆಪಿ ಸರಕಾರ ಗಣಿ ಕೈಗಾರಿಕೆಗೆ ಪರವಾನಗಿಯನ್ನೇ ನೀಡಿಲ್ಲವೆಂದ ಮೇಲೆ ಅಕ್ರಮ ಗಣಿಗಾರಿಕೆಯನ್ನು ಪೋಷಿಸುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ನೈಸರ್ಗಿಕ ಸಂಪತ್ತು ರಕ್ಷಣೆಗೆ ಸರಕಾರ ಕಟಿಬದ್ಧವಾಗಿದೆ. ಆ ನಿಟ್ಟಿನಲ್ಲಿ ಅದಿರು ರಫ್ತು ನಿಷೇಧವನ್ನು ಜಾರಿಗೆ ತಂದ ಮೊದಲ ರಾಜ್ಯ ಎಂಬ ಹಿರಿಮೆಗೆ ಸರಕಾರ ಪಾತ್ರವಾಗಿದೆ ಎಂದ ಅವರು, ರಾಜ್ಯ ಸರಕಾರದ ಈ ಕ್ರಮಕ್ಕೆ ಕೇಂದ್ರದ ಉಕ್ಕು ಸಚಿವ ವೀರಬಹದ್ದೂರ್ ಸಿಂಗ್ ಅವರೇ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಮೈಸೂರಿನಿಂದ ಶಿವಮೊಗ್ಗಕ್ಕೆ ತೆರಳುವ ಮಾರ್ಗಮಧ್ಯೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನ ಕೆಲ ಸಮಯ ವಿಶ್ರಾಂತಿ ಪಡೆದ ಅವರು ಸುದ್ದಿಗಾರರೊಡನೆ ಮಾತನಾಡಿ ಅಕ್ರಮ ಗಣಿಗಾರಿಕೆ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಅಲ್ಲದೆ, ಕೊಬ್ಬರಿಗೆ ಸಹಾಯಧನ ನೀಡುವ ಬಗ್ಗೆ ಸದ್ಯದಲ್ಲೇ ಆದೇಶ ಹೊರಡಿಸಲಾಗುವುದು. ಬೆಳೆಗಾರರು ನೆಫೆಡ್ ಕೇಂದ್ರದಲ್ಲಿ ಕೊಬ್ಬರಿ ಮಾರಾಟ ಮಾಡಿದರೆ 4,700 ಮತ್ತು ರಾಜ್ಯ ಸರಕಾರದ ಸಬ್ಸಿಡಿ 600 ಸೇರಿ ಒಟ್ಟು 5,300 ರೂ.ಗಳನ್ನು ಪಡೆಯಬಹುದು ಎಂದು ಈ ಸಂದರ್ಭದಲ್ಲಿ ಹೇಳಿದರು.

ನೆಫೆಡ್ ಮೂಲಕ ಖರೀದಿಸುವ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ರಾಜ್ಯ ಸರಕಾರದಿಂದ 600 ರೂ. ಸಹಾಯಧನ ನೀಡಲಾಗುವುದು ಎಂದರು.ಪ್ರಸ್ತುತ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಬಹುತೇಕ ಎಲ್ಲ ಅಣೆಕಟ್ಟೆಗಳೂ ತುಂಬುತ್ತಿವೆ. ಎಲ್ಲೆಡೆ ಈವರೆಗೆ ಸುಮಾರು ಶೇ. 70ರಷ್ಟು ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಈ ವರ್ಷ ಉತ್ತಮ ಇಳುವರಿಯನ್ನೂ ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ