ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ: ಬಿಜೆಪಿಗೆ ದೇಶಪಾಂಡೆ (Desh pandy | KPCC | Congress | BJP | Janardana Reddy | Siddaramaiah)
'ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ' ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಆಡಳಿತಾರೂಢ ಬಿಜೆಪಿ ಸರಕಾರಕ್ಕೆ ಸವಾಲು ಹಾಕಿದ್ದಾರೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಸರಕಾರಿ ಪ್ರೌಢಶಾಲೆ ಆವರಣದಲ್ಲಿ 'ನಾಡು ರಕ್ಷಣಾ ನಡಿಗೆ' ಪಾದಯಾತ್ರೆಯ ಬಹಿರಂಗಸಭೆಯಲ್ಲಿ ಮಾತನಾಡಿದರು.
ರಾಜ್ಯ ಬಿಜೆಪಿ ಸರಕಾರ ಚುನಾವಣೆ ವೇಳೆ ನೀಡಿದ್ದ ಆಶ್ವಾಸನೆ ಈಡೇರಿಸುವಲ್ಲಿ ವಿಫಲವಾಗಿದೆ. ಕೃಷಿಗೆ 24 ಗಂಟೆ ನಿರಂತರ ವಿದ್ಯುತ್, ಬಡವರಿಗೆ 2 ರೂ. ದರದಲ್ಲಿ ಅಕ್ಕಿ ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ ಇಂದು ಇಡೀ ರಾಜ್ಯ ವಿದ್ಯುತ್ ಕ್ಷಾಮ ಎದುರಿಸುತ್ತಿದೆ ಎಂದು ಟೀಕಿಸಿದರು.
ಬಿಜೆಪಿ ಸರಕಾರದ ದುರಾಡಳಿತದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಈ ಯಾತ್ರೆ ಆಯೋಜಿಸಲಾಗಿದೆ. ಈ ಪಾದಯಾತ್ರೆ ನಿಲ್ಲುವುದಿಲ್ಲ. ಈ ಭ್ರಷ್ಟ ಸರಕಾರ ಕಿತ್ತೊಗೆಯುವವರೆಗೂ ತಾವು ವಿರಮಿಸುವುದಿಲ್ಲ ಎಂದು ಗುಡುಗಿದರು. ರೆಡ್ಡಿ ಸಹೋದರರ ಹಣ ಹಾಗೂ ಅಧಿಕಾರದ ಅಹಂ ಇಳಿಸಲು ಜನಶಕ್ತಿಯಿಂದ ಮಾತ್ರ ಸಾಧ್ಯ ಎಂದು ಹೇಳಿದರು.