ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾಂಗ್ರೆಸ್ ಪುಕ್ಕಟೆ ಪ್ರಚಾರ ಗಿಟ್ಟಿಸಲು ಯಾತ್ರೆ ಮಾಡುತ್ತಿದೆ: ಶ್ರೀರಾಮುಲು (Congress | BJP | Yeddyurappa | Sri ramulu | Deve gowda)
Bookmark and Share Feedback Print
 
ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಸಂಸತ್ತಿನಲ್ಲಿ ಚರ್ಚಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಲು ಕಾಂಗ್ರೆಸ್ ನಾಯಕರು ಬಳ್ಳಾರಿ ಪಾದಯಾತ್ರೆ ಮೊಟಕುಗೊಳಿಸಿ ದಿಲ್ಲಿ ಯಾತ್ರೆ ಕೈಗೊಳ್ಳುವಂತೆ ಆರೋಗ್ಯ ಸಚಿವ ಶ್ರೀರಾಮುಲು ಸಲಹೆ ನೀಡಿದ್ದಾರೆ.

ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸ್ವಾಭಿಮಾನಿ ಸಮಾವೇಶದಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ವಿಷಯ ಬಿಟ್ಟು ಕೇವಲ ಗಣಿಗಾರಿಕೆಯನ್ನು ಕೈಗೆತ್ತಿಕೊಂಡು ಪಾದಯಾತ್ರೆ ಮೂಲಕ ಪುಕ್ಕಟೆ ಪ್ರಚಾರ ಗಿಟ್ಟಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಸಿಬಿಐ ಕೇಂದ್ರದ ಏಜೆಂಟ್ ತರಹ ಕಾರ್ಯ ನಿರ್ವಹಿಸುತ್ತಿದ್ದು, ರಾಜಕೀಯ ದುರುಪಯೋಗವಾಗುತ್ತಿದೆ. ಇದೇ ಕಾರಣಕ್ಕೆ ಅಕ್ರಮ ಗಣಿಗಾರಿಕೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸಿಬಿಐಗೆ ವಹಿಸುತ್ತಿಲ್ಲ ಎಂದು ಸಮರ್ಥಿಸಿಕೊಂಡರು.

ಬೋಫೋರ್ಸ್ ಹಗರಣ, ಲಾಲೂ ಪ್ರಸಾದ್ ಯಾದವ್ ಅವರ ಮೇವು ಹಗರಣ, ಸಿಖ್ ನರಮೇಧ ಪ್ರಕರಣಗಳಲ್ಲಿ ಸಿಬಿಐ ಕಾರ್ಯವೈಖರಿ ಹೇಗಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಇತ್ತೀಚಿನ 150 ಕೋಟಿ ರೂ.ಗಳ ಗಣಿ ಲಂಚ ಹಗರಣವನ್ನು ಸಿಬಿಐಗೆ ಒಪ್ಪಿಸುವಂತೆ ಕಾಂಗ್ರೆಸ್ ಏಕೆ ಒತ್ತಾಯಿಸಲಿಲ್ಲ? ಸ್ವತಃ ಮಾಜಿ ಪ್ರಧಾನಿ ದೇವೇಗೌಡರೇ ಸಿಬಿಐ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ