ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಳ್ಳಾರಿ ಸಮೀಪಕ್ಕೆ ಕೈ ದಂಡು-ಯಾತ್ರೆಯಲ್ಲಿ ಕಳ್ಳರ ಕಾಟ! (Congress | BJP | Siddaramaiah | Desh pandy | CBI | DKS)
Bookmark and Share Feedback Print
 
ಅಕ್ರಮ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು ಬೆಂಗಳೂರಿನಿಂದ ಬಳ್ಳಾರಿಗೆ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ಶನಿವಾರ 14ನೇ ದಿನಕ್ಕೆ ಕಾಲಿಟ್ಟಿದ್ದು, ಜಾನಪದ ನೃತ್ಯ, ಕೀಲುಕುದುರೆ ಕುಣಿತದೊಂದಿಗೆ ಪಾದಯಾತ್ರೆ ಮುಂದುವರಿದಿದೆ.

ಬಳ್ಳಾರಿಗೆ ತಲುಪಲು ಇನ್ನು ಎರಡೇ ದಿನ ಬಾಕಿ ಇದ್ದು, ಸೋಮವಾರ ಮಧ್ಯಾಹ್ನ ಪಾದಾಯಾತ್ರಿಗಳು ನಿಗದಿತ ಸಮಾವೇಶ ಸ್ಥಳಕ್ಕೆ ಹೋಗಲಿದ್ದಾರೆ. ಪಾದಯಾತ್ರೆ ನೇತೃತ್ವ ವಹಿಸಿರುವ ಸಿದ್ದರಾಮಯ್ಯ, ದೇಶಪಾಂಡೆ, ಡಿ.ಕೆ.ಶಿವಕುಮಾರ್, ಮೋಟಮ್ಮ ಸೇರಿದಂತೆ ಮುಂತಾದ ನಾಯಕರು ದಣಿವಿನ ನಡುವೆಯೂ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುತ್ತ ಹೆಜ್ಜೆ ಹಾಕುತ್ತಿದ್ದಾರೆ.

ಬೆಳಗಾವಿ ಮತ್ತು ಕಾರವಾರ ಜಿಲ್ಲೆಗಳ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆಗೆ ಸೇರಿಕೊಂಡಿದ್ದಾರೆ. ಅಲ್ಲದೆ, ದೇಶಪಾಂಡೆ ಪತ್ನಿ, ಪುತ್ರ ಕೂಡ ಪಾಲ್ಗೊಂಡಿದ್ದಾರೆ. ಪಾದಯಾತ್ರೆ ಇಂದು ರಾತ್ರಿ ಚಿತ್ರದುರ್ಗ ಜಿಲ್ಲೆಯ ರಾಂಪುರಕ್ಕೆ ತಲುಪಲಿದೆ.

ಕಿಡಿಗೇಡಿಗಳಿಂದ ಕಾರ್ಯಕರ್ತರ ಜೇಬಿಗೆ ಕತ್ತರಿ: ಪಾದಯಾತ್ರೆ ಮೊಳಕಾಲ್ಮೂರಿನಿಂದ ಸಾಗುತ್ತಿದ್ದ ವೇಳೆ ಏಕಾಏಕಿ ನೂಕುನುಗ್ಗಲು ಉಂಟಾದ ಪರಿಣಾಮ, ಸಂದರ್ಭದ ಅವಕಾಶ ಗಿಟ್ಟಿಸಿಕೊಂಡ ಕಿಡಿಗೇಡಿಗಳು ಕಾಂಗ್ರೆಸ್ ಕಾರ್ಯಕರ್ತರ ಹಣ, ಮೊಬೈಲ್ ಲಪಟಾಯಿಸಿದ ಘಟನೆ ನಡೆದಿದೆ.

ಕುಣಿತ, ಹಾಡು, ನೂಕುನುಗ್ಗಲಿನಲ್ಲಿ ಸುಮಾರು 15ಕ್ಕೂ ಹೆಚ್ಚು ಕಾರ್ಯಕರ್ತರ ಜೇಬಿಗೆ ಕತ್ತರಿ ಹಾಕಿರುವ ಖದೀಮರು ಕೆಲವು ಮೊಬೈಲ್, 25 ಸಾವಿರಕ್ಕೂ ಅಧಿಕ ಹಣವನ್ನು ಎಗರಿಸಿದ್ದಾರೆ.

ರಾಂಪುರದಲ್ಲಿ ಶಾಸಕಾಂಗ ಸಭೆ: ರಾಂಪುರದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ಶಾಸಕರನ್ನು ಒಗ್ಗೂಡಿಸುವುದೇ ಈ ಸಭೆಯ ಉದ್ದೇಶವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಸೋಮವಾರ ಮಧ್ಯಾಹ್ನ 2ಗಂಟೆಗೆ ಬಳ್ಳಾರಿಯಲ್ಲಿ ಕಾಂಗ್ರೆಸ್ ಸಮಾವೇಶ ನಡೆಯಲಿದ್ದು, ಪಕ್ಷದ ಕೇಂದ್ರದ ನಾಯಕರು ಭಾಗವಹಿಸಲಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ