ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » 15ನೇ ದಿನಕ್ಕೆ ಕಾಲಿಟ್ಟ ಬೆಂಗಳೂರು ಟು ಬಳ್ಳಾರಿ 'ಕೈ' ಯಾತ್ರೆ (Congress | Ballari | BJP | Mining)
Bookmark and Share Feedback Print
 
ಅಕ್ರಮ ಗಣಿಗಾರಿಕೆ ವಿರುದ್ಧ ರಾಜ್ಯ ಕಾಂಗ್ರೆಸ್ ಹಮ್ಮಿಕೊಂಡಿರುವ ಬೆಂಗಳೂರು ಟು ಬಳ್ಳಾರಿ ಪಾದಯಾತ್ರೆ 15ನೇ ದಿನಕ್ಕೆ ಕಾಲಿಟ್ಟಿದ್ದು, ಅಂತಿಮ ಹಂತದಲ್ಲಿದೆ.

ದಿನದಿಂದ ದಿನಕ್ಕೆ ಪಾದಯಾತ್ರೆಗೆ ಭಾರೀ ಜನಬೆಂಬಲ ದೊರಕುತ್ತಿದ್ದು, ಆಗಸ್ಟ್ 9, ಸೋಮವಾರ ಬಳ್ಳಾರಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಬೃಹತ್ ಸಮಾವೇಶದೊಂದಿಗೆ ಪಾದಯಾತ್ರೆ ಅಂತ್ಯಗೊಳ್ಳಲಿದೆ.

ನಿನ್ನೆ ಚಿತ್ರದುರ್ಗದ ರಾಂಪುರದಲ್ಲಿ ಅಂತ್ಯಗೊಂಡಿದ್ದ ಯಾತ್ರೆ ಇಂದು ಬೆಳಗ್ಗೆ ಮುಂದುವರಿಸಲಾಗಿದ್ದು, ಇನ್ನೂ ಕೇವಲ 34 ಕೀ. ಮೀ. ಮಾತ್ರ ಬಾಕಿ ಉಳಿದಿರುವಂತೆಯೇ ಯಾತ್ರೆ ಇನ್ನು ಹತ್ತಿರ ಹತ್ತಿರ ತಲುಪಿದೆ. ಕಣಕುಪ್ಪೆಯಲ್ಲಿ ಇಂದು ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ.

ರಾಜ್ಯ ರಾಜಕೀಯದಲ್ಲಿ ಚಂಚಲವನ್ನೇ ಮೂಡಿಸಿರುವ ಪಾದಯಾತ್ರೆ ಬಳ್ಳಾರಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಣ ನೇರ ಹೋರಾಟವೆಂದೇ ಬಣ್ಣಿಸಲಾಗಿದೆ.

ನಾಳೆ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಸಂಪೂರ್ಣ ಸಿದ್ಧತೆ ಮಾಡಲಾಗಿದ್ದು, ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.

ಅದೇ ವೇಳೆ ಸಮಾವೇಶದ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಭಾರೀ ಬಂದೋಬಸ್ತ್ ಏರ್ಪಡಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತಿದ್ದು, ಮುಂಜಾಗ್ರಾತಾ ಕ್ರಮವಾಗಿ ಬಳ್ಳಾರಿಯಲ್ಲಿ ಇದೀಗಲೇ 69 ಮಂದಿಯನ್ನು ಬಂಧಿಸಲಾಗಿದೆ. ಸೂಕ್ಷ್ಮ ಪ್ರದೇಶದಲ್ಲಿ ತೀವ್ರ ನಿಗಾ ವಹಿಸಲಾಗುತ್ತಿದ್ದು, ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಪಾನ ಪ್ರಿಯರಿಗೆ ಬ್ರೇಕ್...
ಮತ್ತೊಂದೆಡೆ ಕಾಂಗ್ರೆಸ್ ಸಮಾವೇಶದಿಂದಾಗಿ ಪಾನ ಪ್ರಿಯರಿಗೆ ತೊಂದರೆ ಎದುರಾಗಿದೆ. ಸಮಾವೇಶದ ಹಿನ್ನೆಲೆಯಲ್ಲಿ ಇಂದು ಸಂಜೆಯಿಂದ ಮದ್ಯಕ್ಕೆ ನಿಷೇಧ ಹೇರಲಾಗಿದೆ.

ಒಟ್ಟಿನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಬೃಹತ್ ಸಮಾವೇಶದ ಪ್ರಮುಖ ಉದ್ದೇಶ ಅಕ್ರಮ ಗಣಿಗಾರಿಕೆಯನ್ನು ತಡೆಯುವುದಾಗಿದೆ. ಅಲ್ಲದೆ ಯಾವುದೇ ವ್ಯಕ್ತಿ ವಿರುದ್ಧ ವೈಯಕ್ತಿಕ ದ್ವೇಷ ಹೊಂದಿಲ್ಲ ಎಂದು ಪಕ್ಷ ಸ್ಪಷ್ಟಪಡಿಸಿದೆ. ಮುಂದಿನ ದಿನಗಳ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಗೃಹ ಸಚಿವ ಪಿ. ಚಿದಂಬರಂ ಅವರನ್ನು ಮತ್ತೊಮ್ಮೆ ಭೇಟಿಯಾಗಿ ಮನವಿ ಸಲ್ಲಿಸುವು ಕುರಿತು ಮಾತುಕತೆ ನಡೆದಿದೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ 'ವೆಬ್‌ದುನಿಯಾ'ವನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸಂಬಂಧಿತ ಮಾಹಿತಿ ಹುಡುಕಿ