ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾಂಗ್ರೆಸ್ ಶಕ್ತಿಪ್ರದರ್ಶನಕ್ಕೆ ಸಜ್ಜುಗೊಂಡ ಬಳ್ಳಾರಿ (Congress | BJP | Mining | Security)
Bookmark and Share Feedback Print
 
ಅಕ್ರಮ ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್ ಬಳ್ಳಾರಿನಲ್ಲಿ ಸೋಮವಾರ ಶಕ್ತಿ ಪ್ರದರ್ಶನಕ್ಕೆ ಮುಂದಾಗಲಿದೆ. ಇದರೊಂದಿಗೆ ಬೆಂಗಳೂರಿನಿಂದ 15 ದಿನಗಳ ಹಿಂದೆ ಆರಂಭಿಸಿದ್ದ ಪಾದಯಾತ್ರೆ ಬಳ್ಳಾರಿಯಲ್ಲಿ ಸಮಾಪ್ತಿಗೊಳ್ಳಲಿದೆ.

ಅದೇ ವೇಳೆ ಬಳ್ಳಾರಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶಕ್ಕೆ ಬಿಗು ಭದ್ರತೆ ಏರ್ಪಡಿಸಲಾಗಿದ್ದು, ಎಲ್ಲಡೆ ಕಟ್ಟೆಚ್ಚರ ವಹಿಸಲಾಗಿದೆ. ಭದ್ರತಾ ಕಾರ್ಯಾಚರಣೆಗಾಗಿ 5,000 ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದ್ದು, ಬಳ್ಳಾರಿ ಪ್ರವೇಶಿಸುವ ಎಲ್ಲಾ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.

ಕಾಂಗ್ರೆಸ್ ಬೃಹತ್ ಸಮಾವೇಶ ಹಿನ್ನಲೆಯಲ್ಲಿ ಇಂದು ರಾತ್ರಿ 10ರಿಂದ 24 ಗಂಟೆಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಅದೇ ರೀತಿ ಶಾಲಾ ಕಾಲೆಜುಗಳಿಗೆ ರಜಾ ಘೋಷಿಸಲಾಗಿದೆ.

ಮತ್ತೊಂದೆಡೆ ಪಾದಯಾತ್ರೆ ಅಂತಿಮ ಹಂತ ತಲುಪುತ್ತಿದ್ದಂತೆಯೇ ಕಾಂಗ್ರೆಸ್ ನಾಯಕರ ಉತ್ಸಾಹ ಮತ್ತಷ್ಟು ಹೆಚ್ಚಿದೆ. ಕಾಂಗ್ರೆಸ್‌ಗೆ ದೊರಕುತ್ತಿರುವ ಭಾರೀ ಜನ ಬೆಂಬಲದಿಂದಾಗಿ ಬಿಜೆಪಿ ಪಾಳೇಯದಲ್ಲಿ ನಡುಕ ಸೃಷ್ಟಿಸಿದ್ದು, ಸರಕಾರ ಪತನ ಖಚಿತ ಎಂದು ದೇಶಪಾಂಡೆ ತಿಳಿಸಿದ್ದಾರೆ. ಅದೇ ರೀತಿ ಗೊ ಹತ್ಯೆ ನಿಷೇಧ ವಿರುದ್ಧ ಶ್ರೀಘ್ರದಲ್ಲೇ ಪ್ರಧಾನಿಗೆ ಮನವಿ ಸಲ್ಲಿಸಲಾಗುತ್ತದೆ ಎಂದವರು ಹೇಳಿದರು.

ಸೋಮವಾರ ಬಳ್ಳಾರಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಬೃಹತ್ ಸಮಾವೇಶದೊಂದಿಗೆ ಪಾದಯಾತ್ರೆ ಅಂತ್ಯಗೊಳ್ಳಲಿದೆ. 200 ಮಂದಿ ಗಣ್ಯರಿಗೆ ಆಸೀನರಾಗುವ ವೇದಿಕೆ ಸಜ್ಜುಗೊಂಡಿದ್ದು, ಸಮಾವೇಶದಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದೆ.

ಬಿಜೆಪಿ ತಿರುಗೇಟು...
ಮತ್ತೊಂದೆಡೆ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಎಸ್.ಈಶ್ವರಪ್ಪ ಕಾಂಗ್ರೆಸ್ ಪಾದಯಾತ್ರೆಯಿಂದ ಯಾವುದೇ ನಡುಕ ಉಂಟಾಗಿಲ್ಲ. ನಿಜವಾದ ನಡುಕ ಕಾಂಗ್ರೆಸ್‌ಗೆ ಉಂಟಾಗಲಿದೆ ಎಂದು ತಿರುಗೇಟು ನೀಡಿದರು. ಅದೇ ವೇಳೆ ಗೋಹತ್ಯೆ ನಿಷೇಧಕ್ಕೆ ಸಂಬಂದಿಸಿದಂತೆ ಸಿಎಂ ನಿಯೋಗ ನಾಳೆ ರಾಷ್ಟ್ರಪತಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದವರು ತಿಳಿಸಿದರು.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ 'ವೆಬ್‌ದುನಿಯಾ'ವನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸಂಬಂಧಿತ ಮಾಹಿತಿ ಹುಡುಕಿ