ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ದಯಾಮರಣ ಕೋರಿ ಹೈಕೋರ್ಟ್ ಮೊರೆ ಹೋದ ಅಜ್ಜಿ (High court | Mercy killing | Bangalore | Karnataka | BJP)
Bookmark and Share Feedback Print
 
ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ದಾವಣಗೆರೆಯ 70ರ ಹರೆಯದ ಅಜ್ಜಿಯೊಬ್ಬರು ದಯಾ ಮರಣಕ್ಕೆ ಅವಕಾಶ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ ದಯಾಮರಣ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಮೊದಲ ಪ್ರಕರಣ ಕೂಡ ಇದಾಗಿದೆ.

'ತಾನು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ತನ್ನ ಬೆನ್ನುಮೂಳೆ ಜಾರಿ ಹೋಗಿದೆ. ಇದರಿಂದ ದಿನಂಪ್ರತಿ ನೋವಿನಿಂದ ಬದುಕು ಸಾಗಿಸುವುದೇ ಕಷ್ಟವಾಗುತ್ತಿದೆ. ಆದರೆ ಆತ್ಮಹತ್ಯೆಗೆ ಶರಣಾಗಲು ಮನಸ್ಸಾಗುತ್ತಿಲ್ಲ. ಹಾಗಾಗಿ ತನಗೆ ದಯಾಮರಣಕ್ಕೆ ಅವಕಾಶ ಕಲ್ಪಿಸಿಕೊಡಬೇಕೆಂದು' ದಾವಣಗೆರೆಯ ಆಶ್ರಯ ಆನಂದ ಧರ್ಮ ವೃದ್ದಾಶ್ರಮದಲ್ಲಿರುವ ನಿವೃತ್ತ ಶಿಕ್ಷಕಿ ಎಚ್.ಬಿ.ಕರಿಬಸಮ್ಮ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಅಜಿತ್ ಗುಂಜಾಳ್ ಅವರಿದ್ದ ಏಕಸದಸ್ಯ ಪೀಠ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಾಲಯ, ಕಾನೂನು ಸಚಿವಾಲಯ, ರಾಜ್ಯ ಮುಖ್ಯ ಕಾರ್ಯದರ್ಶಿ, ಕಾನೂನು ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ. ಅದೇ ರೀತಿ ಕರಿಬಸಮ್ಮ ಅವರ ಆರೋಗ್ಯ ಸ್ಥಿತಿಯ ವೈದ್ಯಕೀಯ ವರದಿಯನ್ನು ಆ.17ರೊಳಗೆ ಹಾಜರುಪಡಿಸುವಂತೆ ಸೂಚಿಸಿ, ವಿಚಾರಣೆ ಮುಂದೂಡಿದೆ.
ಸಂಬಂಧಿತ ಮಾಹಿತಿ ಹುಡುಕಿ