ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ವಿದ್ಯುತ್ ಕಡಿತ ಅನಿವಾರ್ಯ: ಬಿ.ಎಸ್.ಯಡಿಯೂರಪ್ಪ (Yeddyurappa | BJP | Congress | Power | Karnataka)
Bookmark and Share Feedback Print
 
ರಾಜ್ಯದಲ್ಲಿ ವಿದ್ಯುತ್ ಕಡಿತ ಅನಿವಾರ್ಯ, ಇದಕ್ಕೆ ಏನೂ ಮಾಡೋಕೆ ಆಗಲ್ಲ ಎಂಬುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಮಳೆ ಈ ಬಾರಿಯೂ ಹೆಚ್ಚಿನ ಪ್ರಮಾಣದಲ್ಲಿ ಬಾರದೆ ಇರುವುದರಿಂದ ವಿದ್ಯುತ್ ಲಭ್ಯತೆ ಆಧರಿಸಿ ಸರಬರಾಜು ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಇದೀಗ ಉತ್ಪಾದನೆಯಾಗುತ್ತಿರುವ ವಿದ್ಯುತ್‌ನಲ್ಲಿಯೇ ಸಮರ್ಪಕವಾಗಿ ಸರಬರಾಜು ಮಾಡಲಾಗುತ್ತಿದೆ. ಆ ನಿಟ್ಟಿನಲ್ಲಿ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ ಎಂದು ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರತಿಪಕ್ಷಗಳು ಮಾಡುತ್ತಿರುವ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಿಂದಕರು ಇರಬೇಕು...ಎಂದು ದಾಸರು ಹಾಡಿರುವುದನ್ನು ಉದಾಹರಿಸಿ ಪ್ರತಿಪಕ್ಷಗಳ ಟೀಕೆಯನ್ನು ಆಶೀರ್ವಾದ ಎಂದು ಭಾವಿಸುವೆ ಎಂದರು.

ಅಲ್ಲದೆ, ಸಚಿವ ಸಂಪುಟ ವಿಸ್ತರಣೆ ಕುರಿತು ಮಹತ್ವದ ಮಾತುಕತೆ ನಡೆದಿದೆಯಲ್ಲ ಎಂದು ಪ್ರಶ್ನಿಸಿದಾಗ, ಸಂಪುಟ ಪುನಾರಚನೆ ಸುದ್ದಿ ಮಾಧ್ಯಮಗಳ ಸೃಷ್ಟಿ ಎಂದು ಹೇಳಿದರು. ಆದರೆ ಆಷಾಡ ಮಾಸ ಕಳೆದ ಕೂಡಲೇ ಸಂಪುಟ ಪುನಾರಚನೆ ಮಾಡುವುದಾಗಿ ನೀವೇ ಹೇಳಿದ್ದೀರಲ್ಲ ಎಂದು ಕೆಣಕಿದಾಗ, ಆಷಾಢ...ಯಾವ...ಆಷಾಢ ಎಂದು ಹೇಳಿ ನುಣುಚಿಕೊಂಡರು.
ಸಂಬಂಧಿತ ಮಾಹಿತಿ ಹುಡುಕಿ