ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮೈಸೂರು: ವಿದ್ಯಾರ್ಥಿಗಳ ಜತೆ ರಾಹುಲ್ ಗಾಂಧಿ ಸಂವಾದ (Mysore | Rahul gandhi | AICC | Shimoga | Siddaramaiah)
Bookmark and Share Feedback Print
 
PTI
ಯುವ ಪೀಳಿಗೆಯನ್ನು ರಾಜಕೀಯಕ್ಕೆ ಸೆಳೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ಯುವರಾಜ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಶುಕ್ರವಾರ ಸಾಂಸ್ಕೃತಿಕ ನಗರಿಗೆ ಆಗಮಿಸಿ ಇಲ್ಲಿನ ಸೆಂಟ್ ಫಿಲೋಮಿನಾ ಕಾಲೇಜಿನ ಆಯ್ದ ವಿದ್ಯಾರ್ಥಿಗಳ ಜತೆ ಸುಮಾರು ಒಂದು ಗಂಟೆಗಳ ಕಾಲ ಸಂವಾದ ನಡೆಸಿದರು.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಇಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದ ರಾಹುಲ್ ಗಾಂಧಿಯನ್ನು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಸ್ವಾಗತಿಸಿದರು. ನಂತರ ರಾಹುಲ್ ಮೈಸೂರಿಗೆ ಆಗಮಿಸಿದರು. ಅವರು ಸೆಂಟ್ ಫಿಲೋಮಿನಾ ಕಾಲೇಜಿನ 500 ವಿದ್ಯಾರ್ಥಿಗಳು, ನೂರು ಮಂದಿ ಸಿಬ್ಬಂದಿಗಳ ಜೊತೆ 'ಭಾರತದ ಭವಿಷ್ಯ-ಯುವ ಜನತೆ' ವಿಷಯದ ಕುರಿತು ಒಂದು ಗಂಟೆಗಳ ಕಾಲ ಸಂವಾದ ನಡೆಸಿದರು.

ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ಅವರೊಂದಿಗೆ ಸಂವಾದ ನಡೆಸಿರುವುದಕ್ಕೆ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು. ಸಂವಾದ ವೇಳೆಯಲ್ಲಿ ಕೇಳಿದ ಪ್ರಶ್ನೆಗಳಿಗೆ ಅವರು ಸಮರ್ಪಕವಾದ ಉತ್ತರ ನೀಡಿದ್ದಾರೆ. ಅವರೊಂದಿಗಿನ ಚರ್ಚೆಯ ಸಂದರ್ಭ ನಮೆಗೆಲ್ಲ ಖುಷಿ ಕೊಟ್ಟಿದೆ ಎಂದು ಸಂವಾದದ ನಂತರ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.

ಶಿವಮೊಗ್ಗಕ್ಕೆ ಪ್ರಯಾಣ:ಮೈಸೂರಿನಲ್ಲಿ ಸಂವಾದ ನಡೆಸಿದ ನಂತರ ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ತೆರಳಿದರು. ಇಲ್ಲಿಯೂ ಕೂಡ ಅವರು ಆಚಾರ್ಯ ತುಳಸಿ ಕಾಲೇಜಿನ ವಿದ್ಯಾರ್ಥಿಗಳ ಜತೆ ಕುವೆಂಪು ರಂಗಮಂದಿರದಲ್ಲಿ ಸುಮಾರು 50 ನಿಮಿಷಗಳ ಕಾಲ ಸಂವಾದ ನಡೆಸಲಿದ್ದಾರೆ.

ಆದರೆ ಶಿವಮೊಗ್ಗದಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಪಾಸ್ ಇದ್ದರೂ ಕೂಡ ಪ್ರವೇಶ ನಿರಾಕರಿಸಿದ್ದಾರೆ. ಸ್ಥಳಾವಕಾಶದ ಕೊರತೆಯಿಂದ ಪ್ರವೇಶ ನಿರಾಕರಿಸಿರುವುದಾಗಿ ಸಂಘಟಕರು ತಿಳಿಸಿದ್ದಾರೆ.. ಈ ಬಗ್ಗೆ ಅವಕಾಶ ವಂಚಿತ ವಿದ್ಯಾರ್ಥಿಗಳು ಸಂಘಟಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲೆಡೆ ಬಿಗಿ ಬಂದೋಬಸ್ತ್: ರಾಹುಲ್ ಗಾಂಧಿಯ ಭೇಟಿಯ ಹಿನ್ನೆಲೆಯಲ್ಲಿ ಮೈಸೂರು, ಶಿವಮೊಗ್ಗ, ಧಾರವಾಡದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕೇವಲ ಆಯ್ದ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸುವ ವ್ಯವಸ್ಥೆ ಮಾಡಿದ್ದಾರೆ. ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲ ರೀತಿಯ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಶಿವಮೊಗ್ಗದಲ್ಲಿ ಸಂವಾದ ನಡೆಸಿದ ನಂತರ ರಾಹುಲ್ ಗಾಂಧಿ ಮಧ್ಯಾಹ್ನ ಹುಬ್ಬಳ್ಳಿಗೆ ತೆರಳಲಿದ್ದಾರೆ. ಧಾರವಾಡದ ಎಸ್‌ಡಿಎಂ ಕಾಲೇಜಿನಲ್ಲಿ ಸಂವಾದ ನಡೆಸಲಿದ್ದಾರೆ. ಇಂದು ಧಾರವಾಡದಲ್ಲಿಯೇ ರಾಹುಲ್ ವಾಸ್ತವ್ಯ ಹೂಡಲಿದ್ದಾರೆ. ಆ.14ರಂದು ಗುಲ್ಬರ್ಗದ ಶರಣ ಬಸವೇಶ್ವರ ವಿದ್ಯಾವರ್ಧಕ ಕಾಲೇಜಿನಲ್ಲಿ ಸಂವಾದ ನಡೆಸಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ