ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾಮಗಾರಿಗೆ 86 ಕೋಟಿ ರೂ.ವೆಚ್ಚ: ಗೂಳಿಹಟ್ಟಿ ಶೇಖರ್ (Shekar | BJP | Yeddyurappa | Congress | Karnataka | Bangalore)
Bookmark and Share Feedback Print
 
2009-10ನೇ ಸಾಲಿನಲ್ಲಿ ನೂತನ ಕ್ರೀಡಾಂಗಣ, ಈಜುಕೊಳ ಸೇರಿ ನಾನಾ ಅಭಿವೃದ್ಧಿ ಕಾಮಗಾರಿಗೆ 86 ಕೋಟಿ ರೂ.ವೆಚ್ಚ ಮಾಡಲಾಗಿದೆ ಎಂದು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಚಿವ ಗೂಳಿಹಟ್ಟಿ ಡಿ.ಶೇಖರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ತಾವು ಸಚಿವರಾದ ನಂತರ ಮುಖ್ಯಮಂತ್ರಿ ಹಾಗೂ ರಾಜ್ಯದ ಜನತೆ ಮೆಚ್ಚುವ ರೀತಿ ಇಲಾಖೆ ಅಭಿವೃದ್ದಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಸಾಲಿನಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಗೆ 89 ಕೋಟಿ ರೂ. ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.

ಕ್ರೀಡಾಂಗಣ, ಈಜುಕೊಳ ಮತ್ತಿತರ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಏಳೆಂಟು ತಿಂಗಳಲ್ಲೇ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟಿಸಿದ ಕೀರ್ತಿ ಬಿಜೆಪಿ ಸರಕಾರಕ್ಕೆ ಸಲ್ಲುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.

ದೇಶದಲ್ಲೇ ಮಾದರಿಯಾದ ಈಜು ಕೊಳವನ್ನು ಕೇವಲ 9 ತಿಂಗಳಲ್ಲಿ ನಿರ್ಮಿಸಲಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಒಳಾಂಗಣ ಕ್ರೀಡಾಂಗಣ ಕಾಮಗಾರಿ ಅಂತಿಮ ಹಂತದಲ್ಲಿದೆ. ಇದೆಲ್ಲದರ ಕಾಮಗಾರಿ ಹಿಂದೆ ಜಿಲ್ಲಾಧಿಕಾರಿ ನವೀನ್‌ರಾಜ್‌ ಸಿಂಗ್ ಅವರ ಶ್ರಮ ಮತ್ತು ಕಾಳಜಿ ಇದೆ ಎಂದು ಶ್ಲಾಘಿಸಿದರು. ಹಾಸನ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ನಾಲ್ಕು ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಅಥ್ಲೆಟಿಕ್ ಸಿಂಥೆಟಿಕ್ ಟ್ರಾಕ್ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ