ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾಂಗ್ರೆಸ್ ಪಾದಯಾತ್ರೆಯಿಂದ ಬಿಜೆಪಿ ಕಂಗಾಲು: ಪಾಟೀಲ್ (Patil | BJP | Congress | Pada yathre | Bellary)
Bookmark and Share Feedback Print
 
ನಾಡ ರಕ್ಷಣೆಗಾಗಿ ನಡೆದ ಕಾಂಗ್ರೆಸ್ ಪಾದಯಾತ್ರೆಯಿಂದ ಬಿಜೆಪಿ ವಿರುದ್ಧ ಜನಾಭಿಪ್ರಾಯ ರೂಪುಗೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಆರ್.ಪಾಟೀಲ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ, ಬಿಜೆಪಿ ಅಧಿಕಾರದಲ್ಲಿದ್ದು ಮಾಡುತ್ತಿರುವುದು ಏನು ಎನ್ನುವುದನ್ನು ಜನ ಮನಗಂಡಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್‌ನ ಜನಾಂದೋಲನದಿಂದ ಕಂಗೆಟ್ಟಿರುವ ಬಳ್ಳಾರಿ ಸಚಿವರು, ಹೋಮ, ಹವನಕ್ಕೆ ಶರಣಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾಡುತ್ತಿರುವ ಅಪಚಾರವಾಗಿದೆ. ಬಳ್ಳಾರಿ ಪಾದಯಾತ್ರೆ ಬಿಜೆಪಿ ಸರಕಾರದ ಪತನಕ್ಕೆ ಮುನ್ನುಡಿಯಾಗಲಿದೆ. ಯಾತ್ರೆಯಿಂದ ಪಕ್ಷಕ್ಕೆ ಲಾಭವಾಗುವುದಂತೂ ಖಚಿತ ಎಂದು ತಿಳಿಸಿದ ಅವರು, ವಿಜಾಪುರ, ಬಾಗಲಕೋಟ ಅವಳಿ ಜಿಲ್ಲೆಯಲ್ಲಿ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸರಕಾರದ ವೈಫಲ್ಯಗಳನ್ನು ಜನತೆಗೆ ತಿಳಿಸಿ ಅವರಲಿ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ