ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪವರ್ ಕಟ್ ಕಿರಿಕಿರಿ: ಸರಕಾರದ ವಿರುದ್ಧ ಆಕ್ರೋಶ (Karnataka | BJP | Power cut | Congress | Bescom | Pinya)
Bookmark and Share Feedback Print
 
ರಾಜ್ಯದಲ್ಲಿ ಮಳೆಗಾಲದಲ್ಲಿಯೂ ಕೂಡ ವಿದ್ಯುತ್ ಕಡಿತ ಮಾಡುತ್ತಿರುವುದರಿಂದ ಉದ್ಯಮಕ್ಕೆ ಸಾಕಷ್ಟು ತೊಂದರೆ ಆಗುತ್ತಿದೆ ಎಂದು ಕೈಗಾರಿಕಾ ಸಂಘ ಆಡಳಿತಾರೂಢ ಬಿಜೆಪಿ ಸರಕಾರ ಮತ್ತು ಬೆಸ್ಕಾಂ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ .

ನಗರದಲ್ಲಿ ಪ್ರತಿದಿನ 6ರಿಂದ 7 ಗಂಟೆಗಳ ಕಾಲ ಪವರ್ ಕಟ್ ಮಾಡುತ್ತಿರುವುದರಿಂದ ಕೈಗಾರಿಕಾ ವಲಯದಲ್ಲಿ ಸಾಕಷ್ಟು ತೊಂದರೆ ಉಂಟಾಗುತ್ತಿದೆ. ಇದರಿಂದಾಗಿ ಪ್ರತಿದಿನ ಉದ್ಯಮಕ್ಕೆ ಎರಡು ಲಕ್ಷ ರೂಪಾಯಿ ನಷ್ಟ ಉಂಟಾಗುತ್ತಿದೆ ಎಂದು ಕೈಗಾರಿಕಾ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.

ಪ್ರತಿದಿನ ಯಾವುದೇ ಮುನ್ಸೂಚನೆ ನೀಡದೆ ಆರೇಳು ಗಂಟೆ ಪವರ್ ಕಟ್ ಮಾಡುತ್ತಿರುವುದರಿಂದ ಜನಸಾಮಾನ್ಯರಿಗೂ ತೊಂದರೆ ಉಂಟಾಗುತ್ತಿದೆ ಎಂದು ನಾಗರಿಕರು ಬೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಿನಕ್ಕೆ ನಾಲ್ಕೈದು ಬಾರಿ ಪವರ್ ಕಟ್ ಮಾಡುತ್ತಿದ್ದರೆ ಮಕ್ಕಳಿಗೆ ಓದಲು ತೊಂದರೆಯಾಗುತ್ತಿದೆ ಎಂದು ದೂರಿದ್ದಾರೆ.

ಆ ನಿಟ್ಟಿನಲ್ಲಿ ಶುಕ್ರವಾರ ಪೀಣ್ಯ ಬಳಿ ಕೈಗಾರಿಕಾ ಸಂಘಗಳು ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಸುಮಾರು 50ಕ್ಕೂ ಹೆಚ್ಚು ಮಂದಿ ಪ್ರತಿಭಟನೆ ನಡೆಸಿದರು. ನಿರಂತರವಾಗಿ ವಿದ್ಯುತ್ ಕಣ್ಣಾಮುಚ್ಚಾಲೆ ಆಗುತ್ತಿದ್ದರು ಸಹ ರಾಜ್ಯ ಸರಕಾರ ಈ ಬಗ್ಗೆ ಸ್ಪಷ್ಟನೆ ನೀಡುತ್ತಿಲ್ಲ, ಜನರಿಗೂ ಕಷ್ಟ ತಪ್ಪುತ್ತಿಲ್ಲ ಎಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಕಿಡಿಕಾರಿದರು.

ವಿದ್ಯುತ್ ಕಡಿತದ ಸಮಸ್ಯೆ ಕೇವಲ ನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗಿಲ್ಲ, ಗ್ರಾಮಾಂತರ ಪ್ರದೇಶಗಳಲ್ಲಿಯೂ ಕೂಡ ದಿನಂಪ್ರತಿ ಪವರ್ ಕಟ್ ಮಾಡುವ ಮೂಲಕ ಜನಸಾಮಾನ್ಯರು ಪರದಾಡುವಂತಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ