ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಳ್ಳಬಟ್ಟಿ ದುಷ್ಪರಿಣಾಮದ ಬಗ್ಗೆ ಜನರಿಗೆ ಮಾಹಿತಿ: ರೇಣುಕಾಚಾರ್ಯ (Renukacharya | BJP | Yeddyurappa | Grama sabhe | JDS)
Bookmark and Share Feedback Print
 
ಕಳ್ಳಬಟ್ಟಿ ಮತ್ತು ನಕಲಿ ಮದ್ಯದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ 'ಗ್ರಾಮ ಸಭೆ' ನಡೆಸುವ ಹೊಸ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಅಬಕಾರಿ ಸಚಿವ ರೇಣುಕಾಚಾರ್ಯ ತಿಳಿಸಿದರು.

ಈ ಸಂಬಂಧ ಅಧಿಕಾರಿಗಳಿಗೆ ಆದೇಶಿಸಲಾಗಿದ್ದು, ಈಗಾಗಲೇ ಅಲ್ಲಲ್ಲಿ ಗ್ರಾಮಸಭೆಗಳಿಗೂ ಚಾಲನೆ ನೀಡಲಾಗಿದೆ. ಆ ಮೂಲಕ ಅಧಿಕಾರಿಗಳನ್ನು ಗ್ರಾಮೀಣ ಪ್ರದೇಶಗಳತ್ತ ಕಳುಹಿಸುವ ಕೆಲಸ ಮಾಡಲಾಗಿದೆ ಎಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.

ವಿಭಾಗ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ಗ್ರಾಮೀಣ ಪ್ರದೇಶಗಳ ಕಳುಹಿಸಿ ಕಳ್ಳಬಟ್ಟಿ ಮತ್ತು ನಕಲಿ ಮದ್ಯ ಮಾರಾಟ ತಡೆಯುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಅಬಕಾರಿ ಅಧಿಕಾರಿಗಳು ಗ್ರಾಮೀಣ ಭಾಗದ ಜನಪ್ರತಿನಿಗಳು, ಸ್ತ್ರೀ ಶಕ್ತಿ ಹಾಗೂ ಸಂಘಸಂಸ್ಥೆಗಳ ಸಹಕಾರ ಪಡೆದು ಸಭೆ ನಡೆಸುತ್ತಿದ್ದಾರೆ. ಜತೆಗೆ, ಕಾರ್ಯಕ್ರಮಗಳ ಬಗ್ಗೆ ಇಲಾಖೆಗೆ ಅವರು ವರದಿ ನೀಡಬೇಕಿದೆ. ಸುಳ್ಳು ವರದಿ ನೀಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ