ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಎಲ್ಲೆಡೆ ಸ್ವಾತಂತ್ರ್ಯ ಸಂಭ್ರಮ-ಗಣಿ ಸಂಪತ್ತು ರಕ್ಷಣೆಗೆ ಬದ್ಧ: ಸಿಎಂ (Yeddyurappa | BJP | Congress | Karnataka | Naxal)
Bookmark and Share Feedback Print
 
PR
ನಾಡಿನ ಅಭಿವೃದ್ಧಿಯೇ ಮುಖ್ಯ ಗುರಿಯಾಗಿದ್ದು ಆ ನಿಟ್ಟಿನಲ್ಲಿ ರಾಷ್ಟ್ರದ ಸಂಪತ್ತು ರಕ್ಷಣೆಗೆ ರಾಜ್ಯ ಸರಕಾರ ಬದ್ದವಾಗಿದೆ. ಅಕ್ರಮ ಗಣಿಗಾರಿಕೆಗೆ ತಡೆಗಾಗಿ ನೂತನ ಗಣಿ ನೀತಿ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 64ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ರಾಜ್ಯದ ಜನರಿಗೆ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಭಾನುವಾರ ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ನಂತರ ಸರಕಾರದ ಸಾಧನೆಯ ಸಂಕ್ಷಿಪ್ತ ವಿವರಣೆ ನೀಡಿದ ಮುಖ್ಯಮಂತ್ರಿಗಳು, ರಾಜ್ಯದ ಜನತೆಗೆ 64ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.

ರಾಜ್ಯದ ಜನರು ಆಶೀರ್ವಾದ ಮಾಡುವ ಮೂಲಕ ಜನ ಸೇವೆಗೆ ಅವಕಾಶ ದೊರೆತಿದೆ. ಹಾಗಾಗಿ ರಾಜ್ಯದ ಜನರ ಭರವಸೆಯನ್ನು ಹುಸಿಗೊಳಿಸದ ರೀತಿಯಲ್ಲಿ ಆಡಳಿತ ನಡೆಸುವುದಾಗಿ ಈ ಸಂದರ್ಭದಲ್ಲಿ ಹೇಳಿದರು. ನಾಡಿನ ಅಭಿವೃದ್ದಿಗೆ ಪ್ರಮುಖ ಆದ್ಯತೆ. ಅದಿರು ರಫ್ತು ನಿಷೇಧಿಸಲು ಕೇಂದ್ರಕ್ಕೂ ಮನವಿ ಮಾಡಲಾಗಿದೆ ಎಂದರು.

ದೇಶದಲ್ಲಿನ ಭಯೋತ್ಪಾದನೆ, ನಕ್ಸಲ್‌ವಾದವನ್ನು ಕಿತ್ತೊಗೆಯಬೇಕಾಗಿದೆ. ಆ ಕಾರಣಕ್ಕಾಗಿ ರಾಜ್ಯದಲ್ಲಿಯೂ ನಕ್ಸಲ್ ಪೀಡಿತ ಪ್ರದೇಶಕ್ಕೆ ಹೆಚ್ಚಿನ ನೆರವು ನೀಡಲಾಗುವುದು ಎಂದು ಈ ಸಂದರ್ಭದಲ್ಲಿ ಹೇಳಿದರು. ಲೋಕಾಯುಕ್ತ ಸಂಸ್ಥೆ ಬಲವರ್ಧನೆಗೆ ಕ್ರಮ, ಗೋ ಹತ್ಯೆ ನಿಷೇಧಕ್ಕಾಗಿ ಸದನದಲ್ಲಿ ಅಂಗೀಕಾರ ಪಡೆಯಲಾಗಿದೆ. ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನೀಗಿಸಲು ಕ್ರಮ, ರೈತರಿಗಾಗಿ ಕೃಷಿ ನೀತಿ ಜಾರಿಗೆ ತರಲಾಗಿದೆ ಎಂದು ಸರಕಾರದ ಸಾಧನೆಗಳನ್ನು ವಿವರಿಸಿದರು.

ನೆಲ, ಜಲ, ಭಾಷೆಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು. ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಸ್ಮಾರಕ ಅಭಿವೃದ್ದಿಗೊಳಿಸಲಾಗುವುದು ಎಂದರು.
ಸಂಬಂಧಿತ ಮಾಹಿತಿ ಹುಡುಕಿ