ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬೆಳಗಾವಿ ನಮ್ಮದು, ಕೆಣಕಿದ್ರೆ ಹುಷಾರ್: ಎಂಇಎಸ್‌ಗೆ ಸಿಎಂ (BJP | Yeddyurappa | Karnataka | Congress | MES)
Bookmark and Share Feedback Print
 
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಮತ್ತೆ ಪುನರುಚ್ಚರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಡಿ ವಿವಾದವನ್ನು ಪದೇ ಪದೇ ಕೆಣಕಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬರುವಂತೆ ಯತ್ನಿಸಿದರೆ ಸರಕಾರ ಸುಮ್ಮನಿರುವುದಿಲ್ಲ ಎಂದು ಎಂಇಎಸ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ಅವರು ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ನಂತರ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಮಹಾಜನ್ ಆಯೋಗದ ವರದಿಯಂತೆ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ, ಕೇಂದ್ರ ಸರಕಾರ ಇತ್ತೀಚೆಗೆ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಇದನ್ನು ದೃಢೀಕರಿಸಿದೆ. ಆದರೂ ಕೆಲವರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಗಡಿ ವಿವಾದವನ್ನು ಕೆದಕುತ್ತಿದ್ದಾರೆ. ಯಾವುದೇ ಸಂದರ್ಭ ಬಂದರು ನೆಲ, ಜಲ, ಭಾಷೆ ಸಂಸ್ಕೃತಿ ರಕ್ಷಣೆಯ ವಿಷಯದಲ್ಲಿ ಸರಕಾರ ಹಿಂದೇಟು ಹಾಕುವುದಿಲ್ಲ ಎಂದರು.

ಎರಡು ರಾಜ್ಯಗಳ ನಡುವೆ ಶಾಂತಿ ಹದಗೆಡಲು ಯತ್ನಿಸಿದರೆ ಸರಕಾರ ತಕ್ಕ ಪಾಠ ಕಲಿಸಲಿದೆ ಎಂದು ಎಂಇಎಸ್ ನಾಯಕರಿಗೆ ಎಚ್ಚರಿಕೆ ನೀಡಿದರು. ಈಗಾಗಲೇ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು 239 ಕೋಟಿ ರೂಪಾಯಿ ವೆಚ್ಚದಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಲಾಗುತ್ತಿದೆ. ಬರುವ ಡಿಸೆಂಬರ್‌ನಲ್ಲಿ ಇಲ್ಲಿಯೇ ಅಧಿವೇಶನ ನಡೆಸಲು ಭರದ ಸಿದ್ದತೆ ಕೈಗೊಳ್ಳಲಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ