ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬೇಲೂರು, ಹಳೆಬೀಡು ಅಭಿವೃದ್ಧಿಗೆ ಯೋಜನೆ: ಬಚ್ಚೇಗೌಡ (Bahhegowda | BJP | Congress | Hassan | Independence day)
Bookmark and Share Feedback Print
 
ರಾಷ್ಟ್ರದ ಸಮಗ್ರತೆ, ಏಕತೆಗೆ ಕುತ್ತು ತರುವ ವಿಚ್ಛಿದ್ರಕಾರಿ ಶಕ್ತಿಗಳ ದಮನಕ್ಕೆ ಪ್ರತಿ ಪ್ರಜೆಯೂ ಕಂಕಣಬದ್ಧರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎನ್.ಬಚ್ಚೇಗೌಡ ಕರೆ ನೀಡಿದ್ದಾರೆ.

ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಅಂದು ಪರಕೀಯರ ವಿರುದ್ಧ ಹೋರಾಡಬೇಕಾಗಿತ್ತು. ಆದರೆ ಇಂದು ಪರಕೀಯರ ಜತೆಗೆ ಆಂತರಿಕ ಉಪಟಳವನ್ನೂ ಎದುರಿಸಿ ಮುನ್ನಡೆಯಬೇಕಿದೆ ಎಂದು ತಿಳಿಸಿದರು.

ಒಗ್ಗಟ್ಟಿದ್ದರೆ ದೇಶ ಇನ್ನಷ್ಟು ಅಭಿವೃದ್ದಿಯಲ್ಲಿ ದಾಪುಗಾಲು ಹಾಕಲು ಸಾಧ್ಯ. ಗಾಂಧೀಜಿಯಿಂದ ಹಿಡಿದು, ಜೀವವನ್ನೆ ಮುಡಿಪಾಗಿಟ್ಟು ಹೋರಾಡಿದ ನಾಯಕರ ಆದರ್ಶಗಳನ್ನು ಪರಿಪಾಲಿಸಬೇಕು. ಅವರ ತ್ಯಾಗ, ಬಲಿದಾನವನ್ನು ಸ್ಮರಿಸಿ ಮುನ್ನಡೆಯಬೇಕು ಎಂದರು.

ಹಾಸನ ಜಿಲ್ಲೆ ಸ್ವಾತಂತ್ರ್ಯ ಹೋರಾಟಕ್ಕೆ ತನ್ನದೇ ಆದ ಕೊಡುಗೆ ನೀಡಿರುವುದನ್ನು ಸ್ಮರಿಸಿದ ಸಚಿವರು, ರಾಜ್ಯದಲ್ಲಿ ಸ್ವಾತಂತ್ರ್ಯ ಹೋರಾಟದ ಹಲವಾರು ಮಹತ್ವದ ಸ್ಥಳಗಳನ್ನು ಗುರುತಿಸಿ ಅಭಿವೃದ್ದಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ 14 ನೀರಾವರಿ ಯೋಜನೆಗಳಿಗೆ ಚಾಲನೆ ನೀಡಲು 4256 ಕೋಟಿ ರೂ. ಮೀಸಲಿಟ್ಟಿದ್ದು, ಹಾಸನ ಜಿಲ್ಲೆ ಯೋಜನೆಗಳಿಗೂ ಆದ್ಯತೆ ನೀಡಲಾಗಿದೆ. ಬೇಲೂರು, ಹಳೇಬೀಡು, ಶ್ರವಣಬೆಳಗೊಳದ ಸಮಗ್ರ ಅಭಿವೃದ್ದಿಗೆ ಪ್ರತ್ಯೇಕ ಕ್ರಿಯಾಯೋಜನೆ, ಜನಿವಾರ ಕೆರೆಯಲ್ಲಿ ದೋಣಿ ವಿಹಾರ, ರಾಮನಾಥಪುರ ಲಕ್ಷ್ಮಮಣೇಶ್ವರ ದೇಗುಲಕ್ಕೆ 2 ಕೋಟಿ ಅಂದಾಜಿನಲ್ಲಿ ತೂಗು ಸೇತುವೆ ನಿರ್ಮಿಸಲಾಗುವುದು. ನವೆಂಬರ್ ಅಂತ್ಯದೊಳಗೆ ಹೊಯ್ಸಳ ಮಹೋತ್ಸವ, ಕೃಷಿ ಉತ್ಸವ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ