ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗೋ ಹತ್ಯೆ ನಿಷೇಧ-ಗೌಡ್ರ ವಿರೋಧ ಯಾಕೆ?: ಯಡಿಯೂರಪ್ಪ (Deve gowda | Siddaramaiah | Yeddyurappa | Congress)
Bookmark and Share Feedback Print
 
ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಅಲ್ಪಸಂಖ್ಯಾತರು ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಕಾಂಗ್ರೆಸ್ ಮುಖಂಡರು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ವಿಷಯಕ್ಕೂ ಗೌಡರು ಮತ್ತು ಕಾಂಗ್ರೆಸ್ ಪಕ್ಷದವರಿಗೆ ವಿರೋಧಿಸುವುದೇ ಮಹತ್ವದ ಕೆಲಸವಾಗಿಬಿಟ್ಟಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಜಾರಿಗೆ ತರಲು ಉದ್ದೇಶಿಸಿರುವ ಗೋ ಹತ್ಯೆ ನಿಷೇಧ ಮಸೂದೆಗೆ ಅಂಕಿತ ಹಾಕದಂತೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಮೇಲೆ ಕಾಂಗ್ರೆಸ್, ಜೆಡಿಎಸ್ ಒತ್ತಡ ಹೇರುವ ಕೆಲಸ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗೋ ಹತ್ಯೆ ನಿಷೇಧ ಆಗಬೇಕೆಂದು ರಾಷ್ಟ್ರಪಿತ ಮಹಾತ್ಮಗಾಂಧಿ ಅವರು ಕನಸು ಕಂಡಿದ್ದರು. ಈ ಕಾಯ್ದೆ ಈಗಾಗಲೇ ಏಳು ರಾಜ್ಯಗಳಲ್ಲಿ ಜಾರಿಯಲ್ಲಿದೆ. ಸುಪ್ರೀಂಕೋರ್ಟ್ ಕೂಡ ಗೋ ಹತ್ಯೆ ನಿಷೇಧವನ್ನು ಎತ್ತಿ ಹಿಡಿದಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ