ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪ್ರಕಾಶ್‌ಗೆ ಅವಮಾನ-ರೆಡ್ಡಿ ಕ್ಷಮೆಯಾಚಿಸಲಿ: ಬಸವ ದಳ (Prakash | Congress | JDS | Yeddyurappa | Janardana Reddy)
Bookmark and Share Feedback Print
 
ಕಾಂಗ್ರೆಸ್ ಮುಖಂಡ ಎಂ.ಪಿ.ಪ್ರಕಾಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿಯನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಬಸವದಳದ ಮಂಗಳವಾರ ನಗರದ ಬಸವೇಶ್ವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿತು.

ಇಂದು ಬಸವ ಬಳಗದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸಚಿವ ಜನಾರ್ದನ ರೆಡ್ಡಿ ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.

ಬಸವೇಶ್ವರ ಪ್ರತಿಮೆ ಬಳಿ ಯಾವುದೇ ಪ್ರತಿಭಟನೆ, ಧರಣಿ ನಡೆಸುವಂತಿಲ್ಲ ಎಂದು ಬಸವ ಬಳಗದ ಸದಸ್ಯರ ಪ್ರತಿಭಟನೆಗೆ ಪೊಲೀಸರು ಅಡ್ಡಿಪಡಿಸಿದರು. ಪ್ರತಿಮೆ ಬಳಿ ಧರಣಿ ನಡೆಸುವಂತಿಲ್ಲ ಎಂದು ಹೊರಡಿಸಲಾಗಿದ್ದ ಆದೇಶದ ಪ್ರತಿಯನ್ನು ಪ್ರತಿಭಟನಾಕಾರರು ಸುಟ್ಟು ಹಾಕಿದರು. ಕೂಡಲೇ ಪೊಲೀಸರು ವೀರಶೈವ ಮುಖಂಡರಾದ ಕೇಶವಕುಮಾರ್, ಜಗದೀಶ್, ಹೊಸಕೋಟೆ ಮಂಜುನಾಥ್ ಮತ್ತಿತರರನ್ನು ಬಂಧಿಸಿದರು.

ಪ್ರತಿಭಟನೆಯಲ್ಲಿ ಹಾಜರಿದ್ದ ಕೊಳದಮಠದ ಶಾಂತವೀರ ಮಹಾಸ್ವಾಮೀಜಿಗಳು ಮಾತನಾಡಿ, ಜನಾರ್ದನ ರೆಡ್ಡಿಯವರು ಎಂ.ಪಿ.ಪ್ರಕಾಶ್ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ, ವೀರಶೈವ ಸಮಾಜಕ್ಕೆ ಅವಮಾನ ಮಾಡಿದ್ದಾರೆ. ಅದೇ ರೀತಿ ಮಾಜಿ ಸಚಿವ ಇಬ್ರಾಹಿಂ ಮುಖ್ಯಮಂತ್ರಿಗಳ ವಿರುದ್ಧ ಅವಮಾನಕಾರಿಯಾಗಿ ಮಾತನಾಡಿದ್ದಾರೆ. ಈ ಇಬ್ಬರೂ ಮುಖಂಡರನ್ನು ವೀರಶೈವ ಸಮಾಜದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಸಂಬಂಧಿತ ಮಾಹಿತಿ ಹುಡುಕಿ