ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬೈಲಹೊಂಗಲ ಪುರಸಭೆ ಚುನಾವಣೆ: ಬಿಜೆಪಿ-ಕಾಂಗ್ರೆಸ್ ದೋಸ್ತಿ! (Belagavi | BJP | Congress | Yeddyurappa | JDS)
Bookmark and Share Feedback Print
 
ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಬದ್ಧವೈರಿಗಳಾಗಿದ್ದರೆ, ಮತ್ತೊಂದೆಡೆ ಬೈಲಹೊಂಗಲ ಪುರಸಭೆ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕೈಜೋಡಿಸುವ ಮೂಲಕ ಜೆಡಿಎಸ್‌ನ್ನು ಹೊರಗಿಟ್ಟಿದೆ.

ಬೈಲಹೊಂಗಲ ಪುರಸಭೆಯಲ್ಲಿ ಬಿಜೆಪಿ 10, ಕಾಂಗ್ರೆಸ್ 9 ಹಾಗೂ ಜೆಡಿಎಸ್ 8 ಸದಸ್ಯರನ್ನು ಹೊಂದಿದೆ. ಬುಧವಾರ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಈ ಹಿಂದಿನಂತೆ ಬಿಜೆಪಿ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಅನ್ನು ದೂರ ಇಟ್ಟಿವೆ.

ಒಪ್ಪಂದದಂತೆ ಕಾಂಗ್ರೆಸ್‌ಗೆ ಅಧ್ಯಕ್ಷ ಸ್ಥಾನ, ಬಿಜೆಪಿಗೆ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಕಳೆದ ಒಂದೂವರೆ ವರ್ಷದಿಂದ ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ಒಗ್ಗೂಡಿ ಪುರಸಭೆಯಲ್ಲಿ ಸಮ್ಮಿಶ್ರ ಆಡಳಿತ ನಡೆಸುತ್ತಿದ್ದಾರೆ. ಈ ಮೊದಲು ಮಾಡಿಕೊಂಡಿರುವ ಒಪ್ಪಂದದ ಪ್ರಕಾರ ಬಿಜೆಪಿಗೆ ಅಧ್ಯಕ್ಷ ಸ್ಥಾನ, ಕಾಂಗ್ರೆಸ್‌ಗೆ ಉಪಾಧ್ಯಕ್ಷ ಸ್ಥಾನ ನೀಡಲಾಗಿತ್ತು.

ಇದೀಗ ಎರಡನೇ ಅವಧಿಯಲ್ಲೂ ಬಿಜೆಪಿ-ಕಾಂಗ್ರೆಸ್ ದೋಸ್ತಿ ಮುಂದುವರಿದಿದ್ದು, ಕಾಂಗ್ರೆಸ್ ಪಕ್ಷಕ್ಕೆ ಅಧ್ಯಕ್ಷ ಗಾದಿ ಒಲಿದರೆ, ಬಿಜೆಪಿಗೆ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ