ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಶೋಭಾ, ಸೋಮಣ್ಣ ಸೇರ್ಪಡೆಗೆ ಸಿಎಂ ಮತ್ತೆ ಕಸರತ್ತು (Shobha | Somanna | Yeddyurappa | BJP | Congress)
Bookmark and Share Feedback Print
 
ಸಚಿವ ಸಂಪುಟ ವಿಸ್ತರಣೆಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಟ್ಟು ಹಿಡಿದಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಸಚಿವ ಸಂಪುಟ ವಿಸ್ತರಣೆ ಮಾಡಬಾರದು ಎಂದು ಹೈಕಮಾಂಡ್ ಸೂಚನೆ ಕೊಟ್ಟಿದೆ.ಏತನ್ಮಧ್ಯೆ ಮುಖ್ಯಮಂತ್ರಿಗಳು ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಪಡೆಯಲು ಮತ್ತೆ ವರಿಷ್ಠರ ಮೊರೆ ಹೋಗಿದ್ದಾರೆ.

ಬುಧವಾರ ಸಂಜೆ ನವದೆಹಲಿಗೆ ತೆರಳಿರುವ ಮುಖ್ಯಮಂತ್ರಿಗಳು ಗುರುವಾರ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅವರು ನಾಳೆ ನವದೆಹಲಿ ಕರ್ನಾಟಕ ಭವನದಲ್ಲಿ ನೂತನವಾಗಿ ಜೀರ್ಣೋದ್ಧಾರಗೊಂಡಿರುವ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆಯ ಅಗತ್ಯತೆಯನ್ನು ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಾಜಿ ಸಚಿವೆ, ಶಾಸಕಿ ಶೋಭಾ ಕರಂದ್ಲಾಜೆ ಮತ್ತು ವಿಧಾನಪರಿಷತ್ ಸದಸ್ಯ ವಿ.ಸೋಮಣ್ಣ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಲು ಮುಖ್ಯಮಂತ್ರಿಗಳು ಕಸರತ್ತು ನಡೆಸುತ್ತಿದ್ದಾರೆ. ಆ ಬಗ್ಗೆ ಪಕ್ಷದ ವರಿಷ್ಠರ ಅನುಮತಿ ಪಡೆಯಲು ಮತ್ತೆ ಮುಂದಾಗಿದ್ದಾರೆ. ಆದರೆ ಸದ್ಯದ ಸ್ಥಿತಿಯಲ್ಲಿ ಸಂಪುಟ ವಿಸ್ತರಣೆ ಬೇಡ ಎಂಬುದು ಪಕ್ಷದ ಹೈಕಮಾಂಡ್‌ನ ನಿಲುವಾಗಿದೆ. ಈ ಮಾತನ್ನು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿಯವರೂ ಕೂಡ ಸಲಹೆ ನೀಡಿದ್ದರು.
ಸಂಬಂಧಿತ ಮಾಹಿತಿ ಹುಡುಕಿ