ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಶೀಘ್ರದಲ್ಲೇ ವಿದ್ಯುತ್ ಸಮಸ್ಯೆ ನಿವಾರಣೆ: ಮುರುಗೇಶ್ ನಿರಾಣಿ (Murugesh Nirani | Yeddyurappa | BJP | Karnataka)
Bookmark and Share Feedback Print
 
ವಾರದೊಳಗೆ ರಾಜ್ಯದಲ್ಲಿನ ವಿದ್ಯುತ್ ಸ್ಥಿತಿ ನೂರಕ್ಕೆ ನೂರರಷ್ಟು ಮಾಮೂಲಿ ಸ್ಥಿತಿಗೆ ಬರಲಿದೆ. ಈ ಬಗ್ಗೆ ಸಂಶಯವೇ ಬೇಡ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸಾವಿರ ಮೆಗಾ ವ್ಯಾಟ್ ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ಸದ್ಯದ ವಿದ್ಯುತ್ ಕೊರತೆ ನೀಗಿಸಲು ರಾಜ್ಯ ಸರಕಾರ ಈಗಾಗಲೇ ಕ್ರಮ ಕೈಗೊಂಡಿದೆ ಎಂದರು.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 18 ಸಾವಿರ ಮೆ.ವ್ಯಾ. ವಿದ್ಯುತ್ ಉತ್ಪಾದನೆಗೆ ವಿವಿಧ ಕಂಪನಿಗಳ ಜತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ಕನಿಷ್ಠ 12 ಸಾವಿರ ಮೆ.ವ್ಯಾ. ವಿದ್ಯುತ್ ಉತ್ಪಾದನೆ ಗುರಿ ಹೊಂದಲಾಗಿದೆ. ಕೈಗಾರಿಕೆಗಳಿಗೂ ಮಹಾರಾಷ್ಟ್ರ ಮಾದರಿಯಂತೆ ರೊಟೇಶನ್ ಪದ್ಧತಿಯಲ್ಲಿ ನಿರಂತರ ವಿದ್ಯುತ್ ನೀಡುವ ಚಿಂತನೆ ಕೂಡ ಇದೆ. ಅದೇ ರೀತಿ ವಿದ್ಯುತ್ ವಿತರಣೆಯಲ್ಲಿ ಕೂಡ ಸುಧಾರಣೆಗೆ ಸರಕಾರ ಒತ್ತು ನೀಡಲಿದೆ ಎಂದು ಹೇಳಿದರು.

ಸರಕಾರ ಸಣ್ಣ ಕೈಗಾರಿಕೆಗಳಿಗೂ ಒತ್ತು ನೀಡುತ್ತಿದೆ. ಈ ನಿಟ್ಟಿನಲ್ಲಿ ಸಣ್ಣ ಕೈಗಾರಿಕೆಗಳಿಗೆ 2002ರಿಂದ ಈವರೆಗೆ ಬಿಡುಗಡೆಯಾಗಬೇಕಿದ್ದ 180 ಕೋಟಿ ರೂ. ಸಬ್ಸಿಡಿ ಪೈಕಿ 140 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಿದೆ. ಇನ್ನೂ 30 ಕೋಟಿ ರೂ. ತಿಂಗಳೊಳಗೆ ಬಿಡುಗಡೆಯಾಗಲಿದೆ ಎಂದು ವಿವರಿಸಿದರು.

ಸಣ್ಣ ಕೈಗಾರಿಕೆಗಳ ವಸಾಹತು ಪ್ರದೇಶಗಳಲ್ಲಿ ಮೂಲ ಸೌಕರ್ಯ ಒದಗಿಸಲು ಹಾಗೂ ಸಮಸ್ಯೆ ಬಗೆಹರಿಸಲು ಮೂರು ಹಂತಗಳಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಜತೆ ಸಣ್ಣ ಕೈಗಾರಿಕೆ ಸಂಘಗಳ ಪ್ರತಿನಿಗಳ ದುಂಡು ಮೇಜಿನ ಸಭೆ ನಡೆಸಲಾಗುವುದು. ಅಕ್ಕಪಕ್ಕದ ರಾಜ್ಯದಲ್ಲಿರುವಂತೆ ಕರ ಸೌಲಭ್ಯ ಸಹ ನೀಡಲಾಗುವುದು ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ