ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಜ್ಞಾತ ಸ್ಥಳದಲ್ಲಿ ವಿಚಾರಣೆ: ಮದನಿ ಮೌನಕ್ಕೆ ಶರಣು! (Madani | Bangalore Blast | PDP | CCB | Police)
Bookmark and Share Feedback Print
 
ಉದ್ಯಾನನಗರಿಯಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದ ರೂವಾರಿ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮುಖ್ಯಸ್ಥ ಅಬ್ದುಲ್ ನಾಸಿರ್ ಮದನಿಯನ್ನು ಅಜ್ಞಾತ ಸ್ಥಳದಲ್ಲಿ ಪೊಲೀಸ್ ಅಧಿಕಾರಿಗಳು ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಬಹಳಷ್ಟು ನಾಟಕೀಯ ಬೆಳವಣಿಗೆ ನಂತರ ರಾಜ್ಯ ಪೊಲೀಸರು ಮದನಿಯನ್ನು ಕೊಲ್ಲಂನಲ್ಲಿ ಮದನಿಯನ್ನು ಮಂಗಳವಾರ ಬಂಧಿಸಿ ಅಲ್ಲಿಂದ ಬೆಂಗಳೂರಿಗೆ ಕರೆತಂದು ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಈ ಸಂದರ್ಭದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಮದನಿಯನ್ನು ಹತ್ತು ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿದ್ದರು.

ಇದೀಗ ರಹಸ್ಯ ಸ್ಥಳದಲ್ಲಿ ಮದನಿಯ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಮದನಿ ತನಿಖೆಗೆ ಪೂರ್ಣ ಪ್ರಮಾಣದ ಸಹಕಾರ ನೀಡುತ್ತಿಲ್ಲ ಎಂದು ಹೇಳಲಾಗಿದೆ. ಆತ ಹೆಚ್ಚು ಮೌನಕ್ಕೆ ಶರಣಾಗುತ್ತಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಆತನಿಗೆ ಯಾವುದೇ ತೊಂದರೆ ಆಗದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ರಂಜಾನ್ ಮತ್ತು ಮದನಿಯ ಆರೋಗ್ಯ ಸಮಸ್ಯೆಯಿಂದಾಗಿ ವಿಚಾರಣೆಗೆ ಸ್ವಲ್ಪ ತೊಂದರೆ ಉಂಟಾಗುತ್ತಿದೆ. ರಂಜಾನ್ ಆಗಿರುವುದರಿಂದ ಮದನಿಯನ್ನು ನಿರಂತರವಾಗಿ ವಿಚಾರಣೆಗೆ ಒಳಪಡಿಸುವುದು ಸಾಧ್ಯವಿಲ್ಲ, ಸಮಯ ನೋಡಿ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯಲು ಯತ್ನಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮದನಿಗೆ ಶಿಕ್ಷೆಯಾಗುವುದು ಖಚಿತ ಎಂದು ನಗರ ಪೊಲೀಸ್ ಆಯುಕ್ತ ಶಂಕರ್ ಬಿದರಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ. ಮದನಿ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎನ್ನುವುದಕ್ಕೆ ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸಿದ ನಂತರವೇ ಆತನ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ