ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ನಿಶ್ಚಿತ: ಬೆಳಮಗಿ (BJP | Congress | Yeddyurappa | JDS | Prathibha Patil)
Bookmark and Share Feedback Print
 
ಗೋಹತ್ಯೆ ನಿಷೇಧ ವಿಧೇಯಕವನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಂಗೀಕರಿಸುವ ವಿಶ್ವಾಸವಿದೆ ಎಂದು ಪಶುಸಂಗೋಪನಾ ಖಾತೆ ಸಚಿವ ರೇವು ನಾಯಕ ಬೆಳಮಗಿ ಹೇಳಿದರು.

ನಗರದಲ್ಲಿ ತಮ್ಮ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈ ವಿಧೇಯಕವನ್ನು ಅಂಗೀಕರಿಸಿದಂತೆ ರಾಷ್ಟ್ರಪತಿಗೆ ಮನವಿ ಸಲ್ಲಿಸಿವೆ. ಇದಕ್ಕೆ ಸೊಪ್ಪು ಹಾಕದೇ ಅವರು ಅಂಕಿತ ಹಾಕಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ಗೋಹತ್ಯೆ ನಿಷೇಧವನ್ನು ಯಾರು ಒಪ್ಪಲಿ, ಬಿಡಲಿ ನಾವಂತೂ ಜಾರಿಗೆ ತರುತ್ತೇವೆ. ಈ ಬಗ್ಗೆ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನುಡಿದಂತೆ ನಡೆದುಕೊಳ್ಳಲು ಈಗ ಸರಕಾರ ಮುಂದಾಗಿದೆ. ಈ ವಿಧೇಯಕ ಕುರಿತು ಅವೇಶನದಲ್ಲಿ ಚರ್ಚೆ ಆಗಬೇಕೆಂಬುವುದು ಸರಕಾರದ ಉದ್ದೇಶವೂ ಆಗಿತ್ತು. ಆದರೆ, ಪ್ರತಿಪಕ್ಷಗಳು ಇದಕ್ಕೆ ಆಸ್ಪದ ನೀಡಲಿಲ್ಲ ಎಂದು ಆರೋಪಿಸಿದರು.

ಪಶುಸಂಗೋಪನಾ ಇಲಾಖೆಯಲ್ಲಿ ಶೇ. 50 ರಷ್ಟು ಸಿಬ್ಬಂದಿ ಕೊರತೆಯಿದೆ. ಇದನ್ನು ನೀಗಿಸಲು ಕ್ರಮ ಕೈಗೊಳ್ಳಲಾಗಿದೆ. ಹಾಸನ ಮತ್ತು ಶಿವಮೊಗ್ಗದಲ್ಲಿ ಪಶುವೈದ್ಯಕೀಯ ಕಾಲೇಜು ಈಗಾಗಲೇ ಕಾರ್ಯಾರಂಭ ಮಾಡಿವೆ. ಅಲ್ಲದೇ, ಪ್ರಸಕ್ತ ಬಜೆಟ್‌ನಲ್ಲಿ ಗದಗನಲ್ಲಿ ಮತ್ತೊಂದು ಕಾಲೇಜು ನಿರ್ಮಾಣಕ್ಕೆ ಅನುಮೋದನೆ ನೀಡಿ ಹಣ ಬಿಡುಗಡೆ ಮಾಡಲಾಗಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ