ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಳ್ಳಾರಿ ಸಾಮೂಹಿಕ ವಿವಾಹ: 49 ಅಪ್ರಾಪ್ತ ಜೋಡಿ ವಾಪಸ್ (Bellary | Sushma swaraj | Sri ramulu | Janardana Reddy | Wedding)
Bookmark and Share Feedback Print
 
ಬಳ್ಳಾರಿ ನಗರದಲ್ಲಿ ವರಮಹಾಲಕ್ಷ್ಮಿ ಪೂಜೆ ಅಂಗವಾಗಿ ಆರೋಗ್ಯ ಸಚಿವ ಶ್ರೀರಾಮುಲು ನಡೆಸುತ್ತಿರುವ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅಪ್ರಾಪ್ತ ವಯಸ್ಸಿನ ಹಿನ್ನೆಲೆಯಲ್ಲಿ ಸುಮಾರು 49 ಜೋಡಿಯನ್ನು ವಾಪಸ್ ಕಳುಹಿಸಿರುವ ಘಟನೆ ಶುಕ್ರವಾರ ನಡೆದಿದೆ.

ಸಚಿವ ಶ್ರೀರಾಮುಲು ಅವರು ಕಳೆದ 11 ವರ್ಷಗಳಿಂದ ಆಯೋಜಿಸುತ್ತ ಬಂದಿರುವ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಈ ವರ್ಷ 270 ಜೋಡಿಗಳು ಹಸೆಮಣೆಗೆ ಏರಲು ಸಿದ್ದರಾಗಿದ್ದರು. ಆದರೆ ಕಿಡ್ಸ್ ಎಂಬ ಎನ್‌ಜಿಓ ಸಂಸ್ಥೆಯೊಂದು ಸಾಮೂಹಿಕ ವಿವಾಹ ಸಮಾರಂಭದಲ್ಲಿ 50ಕ್ಕೂ ಅಧಿಕ ಅಪ್ರಾಪ್ತ ವಯಸ್ಸಿನವರಿಗೆ ವಿವಾಹ ಮಾಡಲಾಗುತ್ತಿದೆ ಎಂದು ಆರೋಪಿಸಿ ದೂರು ನೀಡಿತ್ತು.

ಈ ದೂರಿನ ಹಿನ್ನೆಲೆಯಲ್ಲಿ ಮಕ್ಕಳ ಕಲ್ಯಾಣ ಇಲಾಖೆ ಪರಿಶೀಲನೆ ನಡೆಸಿದಾಗ ಅಪ್ರಾಪ್ತ ವಯಸ್ಸಿನ ಸುಮಾರು 49 ಜೋಡಿ ಪತ್ತೆಯಾಗಿತ್ತು. ನಂತರ ಅವರನ್ನು ಸಾಮೂಹಿಕ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಂದಂತೆ ಸೂಚನೆ ನೀಡಿ, ಮನೆಗೆ ವಾಪಸ್ ಕಳುಹಿಸಲಾಗಿದೆ ಎಂದು
ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿ.ಎನ್.ಮೇಟಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ನಡೆಯುತ್ತಿರುವ ಬೃಹತ್ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಯಾವುದೇ ಕಾರಣಕ್ಕೂ ಬಾಲ್ಯ ವಿವಾಹಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಮೇಟಿ ಸ್ಪಷ್ಟಪಡಿಸಿದ್ದಾರೆ.

ಸುಷ್ಮಾ ಆಗಮನ: ಇಂದು ಉಚಿತ ಸಾಮೂಹಿಕ ಸಮಾರಂಭ ಮತ್ತು ಬಿಜೆಪಿ ಜನಜಾಗೃತಿ ಸಮಾವೇಶ ಕೂಡ ನಡೆಯುತ್ತಿದ್ದು, ಅದಕ್ಕಾಗಿ ಲೋಕಸಭೆಯ ವಿಪಕ್ಷ ನಾಯಕಿ ಸುಷ್ಮಾ ಸ್ವರಾಜ್ ಕೂಡ ಆಗಮಿಸಿದ್ದಾರೆ. ನಗರ ಡಾ.ಶ್ರೀನಿವಾಸ ಮೂರ್ತಿ ಅವರ ಮನೆಯಲ್ಲಿ ನಡೆದ ವರಮಹಾಲಕ್ಷ್ಮಿ ಪೂಜೆಯಲ್ಲಿ ಅವರು ಪಾಲ್ಗೊಂಡರು. ನಂತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಇಂದಿನ ಬೃಹತ್ ಜನಜಾಗೃತಿ ಸಮಾವೇಶದಲ್ಲಿ ಕಾಂಗ್ರೆಸ್ ಪಾದಯಾತ್ರೆಗೆ ತಕ್ಕ ಉತ್ತರ ನೀಡುವುದಾಗಿ ಶ್ರೀರಾಮುಲು ಈ ಸಂದರ್ಭದಲ್ಲಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ