ಆಸರೆ ಯೋಜನೆಯಡಿ ಈ ತಿಂಗಳ ಅಂತ್ಯದೊಳಗೆ 5000 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದ್ದು, ಇದೇ ತಿಂಗಳ 26 ಹಾಗೂ 27ರಂದು 1000 ಮನೆಗಳನ್ನು ನೆರೆ ಸಂತ್ರಸ್ತರಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಹಲವೆಡೆ 2000 ಮನೆಗಳು ಈಗ ಪೂರ್ಣಗೊಂಡಿದ್ದು ಈ ತಿಂಗಳಾಂತ್ಯದ ವೇಳೆಗೆ 3000 ಮನೆಗಳು ಪೂರ್ಣಗೊಳ್ಳಲಿವೆ. ಧಾರವಾಡ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಒಟ್ಟು 1000 ಮನೆಗಳು ಹಸ್ತಾಂತರಕ್ಕೆ ಸಿದ್ಧವಾಗಿವೆ. ಅವುಗಳನ್ನು ಈ ತಿಂಗಳು ಹಸ್ತಾಂತರ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.
ಮನೆಗಳ ನಿರ್ಮಾಣದ ಜೊತೆಗೆ ಗ್ರಾಮಗಳ ರಸ್ತೆ, ಕುಡಿಯುವ ನೀರು ಮತ್ತು ವಿದ್ಯುತ್ ಸೌಲಭ್ಯ ಕಲ್ಪಿಸುವ ಕುರಿತೂ ಒತ್ತು ನೀಡಲು ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಯಡಿಯೂರಪ್ಪ ತಿಳಿಸಿದರು.