ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಚುನಾವಣೆ-ಕೇಂದ್ರ ನಾಯಕರ ಪ್ರಚಾರ ಇಲ್ಲ: ಮಲ್ಲಿಕಾರ್ಜುನ ಖರ್ಗೆ (Mallikarjuna Kharge | Congress | By poll | BJP | JDS)
Bookmark and Share Feedback Print
 
ಗುಲ್ಬರ್ಗ ದಕ್ಷಿಣ ಮತ್ತು ಕಡೂರು ವಿಧಾನಸಭೆ ಕ್ಷೇತ್ರಗಳ ಮರು ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರಕ್ಕೆ ಕೇಂದ್ರ ನಾಯಕರು ಆಗಮಿಸುವುದಿಲ್ಲ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ತುರ್ತು ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುವ ಮುನ್ನ ನಗರದಲ್ಲಿ ಪತ್ರಕರ್ತರ ಜತೆಗೆ ಮಾತನಾಡಿ, ಕೆಪಿಸಿಸಿ ನಾಯಕರೇ ಸಾಮೂಹಿಕವಾಗಿ ಪ್ರಚಾರ ಮಾಡಲಿದ್ದಾರೆ ಎಂದರು.

ಮರುಚುನಾವಣೆಯಾಗಿರುವುದರಿಂದ ರಾಷ್ಟ್ರೀಯ ನಾಯಕರನ್ನು ಕರೆ ತರುವುದು ಸೂಕ್ತವಲ್ಲ ಎಂದು ಖರ್ಗೆ ಅಭಿಪ್ರಾಯವ್ಯಕ್ತಪಡಿಸಿದರು. ತಾವು ಸೆ.1ರಿಂದ ಮೂರು ದಿನ ಗುಲ್ಬರ್ಗದಲ್ಲಿ ಪ್ರಚಾರ ನಡೆಸುವುದಾಗಿ ತಿಳಿಸಿದರು. ಕೆಪಿಸಿಸಿ ಸೂಚನೆ ನೀಡಿದರೆ ಕಡೂರು ಕ್ಷೇತ್ರಕ್ಕೂ ಹೋಗಿ ಬರುವುದಾಗಿ ಹೇಳಿದರು.

ಸೇಡಂ ಪಟ್ಟಣದಲ್ಲಿ ಶನಿವಾರ ನಡೆದ ಪುರಸಭೆ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಪಾಲ್ಗೊಳ್ಳುವ ಮೂಲಕ ತಾವು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ ಎಂದು ಖರ್ಗೆ ಸ್ಪಷ್ಟಪಡಿಸಿದರು.

ಪ್ರವಾಸಿ ಮಂದಿರ ಪ್ರವೇಶ ಮಾಡಿಲ್ಲ ಎಂದಾದ ಮೇಲೆ ಅಲ್ಲಿ ಸಭೆ ನಡೆಸಲು ಹೇಗೆ ಸಾಧ್ಯ. ಪುರಸಭೆಯ ಆವರಣದಲ್ಲಿ ನನ್ನ ಕಾರಿನಲ್ಲಿಯೇ ಸುಮಾರು ಒಂದು ಗಂಟೆ ಕಾದು ಕುಳಿತಿದ್ದೆ, ಇನ್ನು ಪಕ್ಷದ ಧ್ವಜ ಹಿಡಿದು ಮೆರವಣಿಗೆ ಮಾಡುವುದು ಎಲ್ಲಿಂದ ಬಂತು ಎಂದು ಖರ್ಗೆ ಪ್ರಶ್ನಿಸಿದರು.
ಸಂಬಂಧಿತ ಮಾಹಿತಿ ಹುಡುಕಿ