ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗೋ ಹತ್ಯೆ ನಿಷೇಧ ರಾಷ್ಟ್ರಪತಿಗೆ ಬಿಟ್ಟಿದ್ದು: ಭಾರದ್ವಾಜ್ (BJP | Congress | JDS | Bharadwaj | Prathibha patil)
Bookmark and Share Feedback Print
 
ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಜಾರಿಗೆ ಮುಂದಾಗಿರುವ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಒಡೆದು ಆಳುವ ನೀತಿಯಾಗಿದೆ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದ್ದು, ಗೋ ಹತ್ಯೆ ನಿಷೇಧ ವಿಧೇಯಕಕ್ಕೆ ಅಂಕಿತ ಹಾಕುವುದು, ಬಿಡುವುದು ರಾಷ್ಟ್ರಪತಿಗೆ ಬಿಟ್ಟ ವಿಚಾರ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಸೋಮವಾರ ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ವಿಧೇಯಕ ಕುರಿತಂತೆ ಬಿಜೆಪಿ ರಾಜ್ಯಾಪಾಲರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಕ್ಕೆ ಈ ರೀತಿಯಾಗಿ ಪ್ರತಿಕ್ರಿಯಿಸಿದರು.

ನಾನು ರಾಜ್ಯಪಾಲನಾಗಿ ನನ್ನ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಎಲ್ಲಾ ರೀತಿಯ ಸಮಸ್ಯೆಗಳನ್ನು ತಪ್ಪಿಸಬೇಕಿದ್ದರೆ, ಇಂತಹ ಕಾಯ್ದೆಗಳು ಜಾರಿಯಾಗಬಾರದು. ಆ ಕಾರಣಕ್ಕಾಗಿಯೇ ಗೋ ಹತ್ಯೆ ನಿಷೇಧ ವಿಧೇಯಕವನ್ನು ರಾಷ್ಟ್ರಪತಿಗೆ ಕಳುಹಿಸಿರುವುದಾಗಿ ಸ್ಪಷ್ಟಪಡಿಸಿದರು.

ಗೋ ಹತ್ಯೆ ನಿಷೇಧ ವಿಧೇಯಕದ ಮೂಲಕ ಬಿಜೆಪಿ ರಾಜಕೀಯ ಮಾಡಲು ಹೊರಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಅವರು, ತಾನು ಯಾವುದೇ ಪಕ್ಷದ ಏಜೆಂಟ್ ಅಲ್ಲ. ಅಲ್ಲದೇ ಯಾರ ಟೀಕೆ, ಟಿಪ್ಪಣಿಗೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಜಾರಿ ಮಾಡುವ ನಿಟ್ಟಿನಲ್ಲಿ ಬಿಜೆಪಿ ಸರಕಾರ ವಿಧಾನ ಮಂಡಲದ ಉಭಯ ಸದನಗಳಲ್ಲೂ ಅಂಗೀಕಾರ ಪಡೆದು ಅದನ್ನು ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿತ್ತು. ಆದರೆ ರಾಜ್ಯಪಾಲರು ಗೋ ಹತ್ಯೆ ನಿಷೇಧ ವಿಧೇಯಕಕ್ಕೆ ಅಂಕಿತ ಹಾಕದೆ ಅದನ್ನು ರಾಷ್ಟ್ರಪತಿಗೆ ಕಳುಹಿಸಿಕೊಟ್ಟಿದ್ದರು. ಆ ನಿಟ್ಟಿನಲ್ಲಿ ಗೋ ಹತ್ಯೆ ನಿಷೇಧ ವಿಧೇಯಕಕ್ಕೆ ಅಂಕಿತ ಹಾಕುವಂತೆ ರಾಷ್ಟ್ರಪತಿಗಳ ಮೇಲೆ ಒತ್ತಡ ಹೇರಲು ಸೆಪ್ಟೆಂಬರ್ 1ರಿಂದ 5ರವರೆಗೆ ರಾಜ್ಯಾದ್ಯಂತ ಧರಣಿ ನಡೆಸಲು ಬಿಜೆಪಿ ನಿರ್ಧರಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ