ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗೋಹತ್ಯೆ ನಿಷೇಧ ಗಾಂಧೀಜಿ ಕನಸೂ ಆಗಿತ್ತು: ಯಡಿಯೂರಪ್ಪ (Yeddyurappa | Gandhi | BJP | Congreess | Bharadwaj)
Bookmark and Share Feedback Print
 
ಗೋಹತ್ಯೆ ನಿಷೇಧ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಕನಸೂ ಆಗಿತ್ತು. ಮಹತ್ವಾಕಾಂಕ್ಷಿ ವಿಧೇಯಕ ಜಾರಿಯಲ್ಲಿ ಆಗುತ್ತಿರುವ ವಿಳಂಬ ಖಂಡಿಸಿ ದೊಡ್ಡ ಪ್ರಮಾಣದ ಜನಾಂದೋಲನವೇ ನಡೆಯಬೇಕಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಹುಕ್ಕೇರಿ ತಾಲೂಕಿನ ನಿಡಸೋಸಿಯಲ್ಲಿ ಬುಧವಾರ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷದವರು ಮತ್ತು ರಾಜ್ಯಪಾಲರ ಹೆಸರೆತ್ತದೇ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಗೋಹತ್ಯೆ ನಿಷೇಧದ ಬಗ್ಗೆ ರಾಜ್ಯ ಸರಕಾರ ಕ್ರಮ ಕೈಗೊಂಡಿದೆ. ವಿಧಾನ ಮಂಡಲದಲ್ಲಿ ಒಪ್ಪಿಗೆ ಕೊಡಲಾಗಿದೆ. ಈಗ ವಿನಾಕಾರಣ ರಾಷ್ಟ್ರಪತಿಗಳ ಬಳಿಗೆ ಹೋಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೇಶದ ಕೆಲ ರಾಜ್ಯಗಳಲ್ಲಿ ಗೋ ಹತ್ಯೆ ಜಾರಿಯಲ್ಲಿದೆ. ಆದರೆ ಈಗ ಕರ್ನಾಟಕದಲ್ಲಿ ಜಾರಿಯಾಗದಂತೆ ತಡೆಯಲು ರಾಷ್ಟ್ರಪತಿಗಳನ್ನು ಭೇಟಿ ಮಾಡುವ ರಾಜಕಾರಣ ನಡೆಯುತ್ತಿದೆ. ಈ ಮಟ್ಟಕ್ಕೆ ಇಳಿದಿರುವುದು ಯಾರಿಗೂ ಶೋಭೆ ತರುವ ಮಾತಲ್ಲ. ಅಲ್ಪಸಂಖ್ಯಾತರು ಗೋಹತ್ಯೆ ನಿಷೇಧ ಕಾನೂನಿಗೆ ಅಡ್ಡಿಪಡಿಸಿಲ್ಲ. ಆದರೆ ಅವರ ಮೂಗಿಗೆ ತುಪ್ಪ ಸವರಿ ರಾಜಕೀಯ ಗೊಂದಲ ಹುಟ್ಟುಹಾಕುವ ಕೆಲಸ ನಡೆಯುತ್ತಿದೆ ಎಂದು ಟೀಕಿಸಿದರು.
ಸಂಬಂಧಿತ ಮಾಹಿತಿ ಹುಡುಕಿ