ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಎರಡು ವರ್ಷಗಳ ಅಧಿಕಾರಾವಧಿಯಲ್ಲಿ ಜನಪರ ಯೋಜನೆ ಜಾರಿಗೆ ತಂದಿದೆ ಎಂದು ವಸತಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ತಿಳಿಸಿದ್ದಾರೆ.
ತಾಲೂಕಿನ ಮಧುರೆ ಸಮೀಪದ ಬ್ರಹ್ಮವಿದ್ಯಾನಗರದ ಭಗೀರಥ ಪೀಠಕ್ಕೆ ಭೇಟಿ ನೀಡಿ ಶ್ರೀಮಠದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು,ರಾಜ್ಯದಲ್ಲಿ ಪ್ರಥಮ ಬಾರಿಗೆ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರಕಾರ ನಿರೀಕ್ಷೆಗೂ ಮೀರಿ ಕೆಲಸ ಮಾಡುತ್ತಿದೆ ಎಂದರು.
ಮುಖ್ಯಮಂತ್ರಿ ಯಡಿಯೂರಪ್ಪ ನಾಲ್ಕು ವರ್ಷಗಳಲ್ಲಿ 30 ಸಾವಿರ ಕೋಟಿ ರೂ. ಇದ್ದ ಬಜೆಟ್ ಅನ್ನು 70 ಸಾವಿರ ಕೋಟಿ ರೂ. ಗೆ ಹೆಚ್ಚಿಸಿದ್ದಾರೆ ಎಂದು ಹೇಳಿದರು. ಯಡಿಯೂರಪ್ಪ ನೇತೃತ್ವದ ಸರಕಾರ ರಾಜ್ಯದ ಎಲ್ಲ ಜನತೆಗೆ ಸಾಮಾಜಿಕ ನ್ಯಾಯ ಕೊಡುವಲ್ಲಿ ಅಗತ್ಯ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಹೇಳಿದರು.