ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಬ್ದುಲ್ ನಾಸಿರ್ ಮದನಿಗೆ ಎದೆನೋವು: ಆಸ್ಪತ್ರೆಗೆ ದಾಖಲು (Madani | Bangalore Blast | CCB | Police | Court)
Bookmark and Share Feedback Print
 
ಬೆಂಗಳೂರು ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದ ಪಿಡಿಪಿ ಮುಖಂಡ ಅಬ್ದುಲ್ ನಾಸಿರ್ ಮದನಿ ಎದೆನೋವು ಎಂದು ಹೇಳಿದ ಕಾರಣ ಶುಕ್ರವಾರ ಆತನನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವ ಮದನಿಯನ್ನು ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿ ಮದನಿಯನ್ನು ಒಳರೋಗಿಯಾಗಿ ಸೇರಿಸಿಕೊಳ್ಳುವುದರ ಬಗ್ಗೆ ಸಂಜೆ ನಿರ್ಧರಿಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

ಮದನಿಯನ್ನು ಕಳೆದ 10 ದಿನಗಳ ಹಿಂದೆ ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿ ಗುರುವಾರ ಕಸ್ಟಡಿ ಅವಧಿ ಕೊನೆಗೊಂಡ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಆತನನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ತನ್ನ ಆರೋಗ್ಯ ಸರಿಯಿಲ್ಲ. ಸರಿಯಾದ ವೈದ್ಯಕೀಯ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ನ್ಯಾಯಾಧೀಶರ ಮುಂದೆ ಆರೋಪಿಸಿದ್ದ. ಆ ನಿಟ್ಟಿನಲ್ಲಿ ಪೊಲೀಸರು ಇಂದು ಜಯದೇವ ಹೃದ್ರೋಗ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ಮದನಿಗೆ ರಂಜಾನ್ ಉಪವಾಸದ ಧಾರ್ಮಿಕ ಆಚರಣೆಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ