ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗೋ ಹತ್ಯೆ ನಿಷೇಧ: ದಸಂಸ ಪಂಜಿನ ಮೆರವಣಿಗೆ (DSS | BJP | Yeddyurappa | Congress | JDS | Karnataka)
Bookmark and Share Feedback Print
 
ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯನ್ನು ವಿರೋಧಿಸಿ ಮತ್ತು ರಾಷ್ಟ್ರಪತಿಯವರು ಈ ಮಸೂದೆ ತಿರಸ್ಕರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಸೆಪ್ಟೆಂಬರ್ 6ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬನ್ನಪ್ಪ ಪಾರ್ಕ್‌ನಿಂದ ರಾಜಭವನದವರೆಗೆ ಪಂಜಿನ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸುವುದಾಗಿ ಸಂಘಟಕರು ತಿಳಿಸಿದ್ದಾರೆ.

ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಎನ್.ಮೂರ್ತಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಈ ಸಂದರ್ಭದಲ್ಲಿ ಭಿಕ್ಷುಕರ ಸರಣಿ ಸಾವಿನ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆಗ್ರಹಿಸಲಾಗುವುದು ಎಂದರು.

ರಾಜ್ಯ ಸರಕಾರ 1964ರ ಗೋ ಹತ್ಯೆ ನಿಷೇಧದ ಬದಲಾಗಿ ಕರ್ನಾಟಕ ಗೋ ಹತ್ಯೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆಯ ಹೊಸ ಮಸೂದೆಯನ್ನು ರಾಜ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್‌ ಕಲಾಪದ ವೇಳೆ ಚರ್ಚಿಸದೆ ಸರ್ವಾಧಿಕಾರಿ ಧೋರಣೆಯಿಂದ ಏಕಪಕ್ಷೀಯವಾಗಿ ಅಂಗೀಕರಿಸಿರುವುದು ಸಂವಿಧಾನಬಾಹಿರ ಹಾಗೂ ಪ್ರಜಾಪ್ರಭುತ್ವ ವಿರೋಧಿ ಕ್ರಮದ ಪ್ರತೀಕವಾಗಿದೆ ಎಂದು ದೂರಿದರು.

ಈ ಮಸೂದೆ ವಿಚಾರದಲ್ಲಿ ರಾಷ್ಟ್ರಪತಿಯವರ ಸಹಿಗಾಗಿ ಒತ್ತಡ ಹೇರಲು ಬೀದಿ ಹೋರಾಟಕ್ಕಿಳಿದಿರುವುದು ಬಿಜೆಪಿ ಸರಕಾರದ ಜನವಿರೋಧಿ ನೀತಿಗೆ ಹಿಡಿದ ಕನ್ನಡಿ ಎಂದು ಟೀಕಿಸಿದರು.
ಸಂಬಂಧಿತ ಮಾಹಿತಿ ಹುಡುಕಿ