ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗಳು ನಡೆಯುತ್ತಿರುವ ಸಂದರ್ಭದಲ್ಲಿ, ಆದಿ ಬಣಜಿಗ ಸಮಾಜವನ್ನು 2ಎಗೆ ಸೇರ್ಪಡೆಗೊಳಿಸುವುದಾಗಿ ಮುಖ್ಯಮಂತ್ರಿ ಹೇಳಿಕೆ ನೀಡಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಚುನಾವಣೆಯಲ್ಲಿ ಮತದಾರರನ್ನು ಓಲೈಸಲು ಮುಖ್ಯಮಂತ್ರಿ ಯಡಿಯೂರಪ್ಪ ಜಾತಿ ರಾಜಕೀಯ ಮಾಡುತ್ತಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಇಂತಹ ಹೇಳಿಕೆಗಳನ್ನು ನೀಡಿ, ಮತದಾರರನ್ನು ಹಾಗೂ ಚುನಾವಣಾ ಆಯೋಗವನ್ನು ವಂಚಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಚುನಾವಣಾ ಆಯೋಗ, ಮುಖ್ಯಮಂತ್ರಿಗಳು ನೀಡಿರುವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ದೇಶಪಾಂಡೆ ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿಗಳ ಹೇಳಿಕೆಯ ಹಿಂದೆ ರಾಜಕೀಯ ಷಢ್ಯಂತ್ರ ಅಡಗಿದ್ದು, ಒಂದು ಸಮುದಾಯದ ಮತದಾರರನ್ನು ಸೆಳೆಯುವ ಹುನ್ನಾರ ನಡೆಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದೇಶಪಾಂಡೆ ಅಸಮಧಾನ ವ್ಯಕ್ತಪಡಿಸಿದ್ದಾರೆ.