ಶೀಘ್ರದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯಾಗಲಿದೆ ಎನ್ನುವ ವರದಿಗಳನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಾನು ಅಧಿಕಾರದಲ್ಲಿರುವವರೆಗೆ ಉಪಮುಖ್ಯಮಂತ್ರಿ ಹುದ್ದೆ ರಚನೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಉಪಮುಖ್ಯಮಂತ್ರಿ ಹುದ್ದೆ ರಚನೆ ಕೇವಲ ಉಹಾಪೋಹ ವರದಿಗಳು ಆಧಾರರರಹಿತವಾಗಿವೆ. ಕಡೂರ್ ಮತ್ತು ಗುಲ್ಬರ್ಗಾದ ಉಪಚುನಾವಣೆಗಳು ಮುಕ್ತಾಯಗೊಂಡ ನಂತರ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ನಾನು ಮುಂಬರುವ ಮೂರು ವರ್ಷಗಳ ಅವಧಿಯಲ್ಲಿ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುತ್ತೇನೆ. ಅಲ್ಲಿಯವರೆಗೆ ಉಪಮುಖ್ಯಮಂತ್ರಿ ಹುದ್ದೆ ಇರುವುದಿಲ್ಲ ಎಂದು ಹೇಳಿದರು.
ಕಬ್ಬಿಣ ಅದಿರು ಸಾಗಾಣಿಕೆ ರಾಜ್ಯದಲ್ಲಿ ಮುಂದುವರಿದಿದೆ ಎನ್ನುವ ವರದಿಗಳನ್ನು ಪರಿಶೀಲಿಸಿದ್ದೇನೆ. ಅಕ್ರಮ ಗಣಿಗಾರಿಕೆ ತಡೆಗೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.